Advertisement

Gram Panchayat ಆಸ್ತಿಗಳ ನಕ್ಷೆಗೆ ತೀರ್ಮಾನ: ಪ್ರಿಯಾಂಕ್‌ ಖರ್ಗೆ

11:40 PM Aug 04, 2024 | Team Udayavani |

ಬೆಂಗಳೂರು: ಗ್ರಾಮ ಪಂಚಾಯತ್‌ಗಳಿಗೆ ಹೆಚ್ಚಿನ ಸಂಪನ್ಮೂಲಗಳನ್ನು ಕ್ರೋಡೀಕರಿಸುವ ನಿಟ್ಟಿನಲ್ಲಿ ಪಂಚಾಯತ್‌ ಆಸ್ತಿಗಳ ನಕ್ಷೆ ರೂಪಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಮುಂದಾಗಿದೆ.

Advertisement

ಈ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸೂಚನೆ ನೀಡಿದ್ದಾರೆ.

ಗ್ರಾ.ಪಂ.ಗಳಲ್ಲಿ ಆಸ್ತಿಗಳ ನಕ್ಷೆ ರೂಪಿಸುವ ಯೋಜನೆ ಕುರಿತು ವಿವರ ನೀಡಿದ ಸಚಿವರು, ಗ್ರಾ.ಪಂ.ಗಳನ್ನು ಸಂಪೂರ್ಣವಾಗಿ ಮತ್ತು ಸ್ವತಂತ್ರವಾಗಿ ಆಡಳಿತ ನಡೆಸುವಂತೆ ಆರ್ಥಿಕವಾಗಿ ಬಲಗೊಳಿಸಲು ಉದ್ದೇಶಿಸಲಾಗಿದೆ ಎಂದರು.


Advertisement

Udayavani is now on Telegram. Click here to join our channel and stay updated with the latest news.

Next