Advertisement

ಕನಕದಾಸ ಜಯಂತಿ ವಿಜೃಂಭಣೆಯಿಂದ ಆಚರಿಸಲು ನಿರ್ಣಯ

11:20 AM Nov 20, 2018 | |

ಕಲಬುರಗಿ: ಸಂತ ಶ್ರೇಷ್ಠ ಕವಿ ಕನಕದಾಸರ ಜಯಂತಿಯನ್ನು ನಗರ ಹಾಗೂ ತಾಲೂಕು ಕೇಂದ್ರಗಳಲ್ಲಿ ನ.26ರಂದು ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

Advertisement

ನಗರೇಶ್ವರ ಬಾಲವಿಕಾಸ ಮಂದಿರದಲ್ಲಿ ಅಂದು ಬೆಳಗಿನ 9:30ಕ್ಕೆ ಕನಕದಾಸರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿದ ನಂತರ ಭಾವಚಿತ್ರದೊಂದಿಗೆ ಮೆರವಣಿಗೆ ಭಾಂಡೇ ಬಜಾರ, ಸೂಪರ್‌ ಮಾರ್ಕೆಟ್‌, ಜಗತ್‌ ವೃತ್ತದ ಮಾರ್ಗವಾಗಿ ಡಾ|ಎಸ್‌.ಎಂ. ಪಂಡಿತ ರಂಗಮಂದಿರದವರೆಗೆ ಹಮ್ಮಿಕೊಳ್ಳಲಾಗುವುದು. ಮಧ್ಯಾಹ್ನ 2:00ಕ್ಕೆ ರಂಗಮಂದಿರದಲ್ಲಿ ಉದ್ಘಾಟನಾ ಕಾರ್ಯಕ್ರಮ ಹಾಗೂ ಕನಕದಾಸರ ಜೀವನಕ್ಕೆ ಸಂಬಂಧಿಸಿದಂತೆ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಕೀರ್ತನೆಗಳನ್ನು ಹಾಗೂ ವಿಶೇಷ ಉಪನ್ಯಾಸ ಆಯೋಜಿಸಲಾಗುವುದು ಎಂದು ಹೇಳಿದರು.

ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಭಜನೆ ವಾದನದ ಮುಂತಾದ ಜಾನಪದ ಕಲಾತಂಡಗಳ ವ್ಯವಸ್ಥೆ ಮಾಡಬೇಕು. ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಸ್ವತ್ಛತೆ ಕಾಪಾಡಿಕೊಳ್ಳಬೇಕು. ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸೂಕ್ತ ಪೊಲೀಸ್‌ ಬಂದೋಬಸ್ತ್ ಮಾಡಬೇಕು.

ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಕನಕದಾಸರ ಜಯಂತಿ ಆಚರಿಸಬೇಕು ಹಾಗೂ ನಗರದ ಶಾಲಾ ಮುಖ್ಯಸ್ಥರು ಕಡ್ಡಾಯವಾಗಿ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ಜಯಂತಿ ನಿಮಿತ್ತ ಪ್ರಚಾರಕ್ಕಾಗಿ ಫ್ಲೆಕ್ಸ್‌, ಬ್ಯಾನರ್‌ ಅಳವಡಿಸಬೇಕಾದಲ್ಲಿ ಮಹಾನಗರ ಪಾಲಿಕೆಯಿಂದ ನಿಗದಿತ ಶುಲ್ಕ ಪಾವತಿಸಿ ಅನುಮತಿ ಪಡೆದು ಅಳವಡಿಸಿಕೊಳ್ಳಬಹುದು. ಜಯಂತ್ಯೋತ್ಸವ ಸಮಾರಂಭವನ್ನು ಶಾಂತಿಯುತವಾಗಿ ಆಚರಿಸಲು ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.

ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಕರ್ನಾಟಕ ಪ್ರದೇಶ ಕುರುಬ ಸಂಘದ ಅಧ್ಯಕ್ಷ ತಿಪ್ಪಣ್ಣ ಬಳಬಟ್ಟಿ, ಗಿರೆಪ್ಪ ಕಟ್ಟಿಮನಿ, ಡಾ| ಬಾಬು ಪೂಜಾರಿ, ರವೀಂದ್ರಪ್ಪ ನಾಯಕೋಡಿ ಹಾಗೂ ಸಮಾಜದ ಮುಖಂಡರು ಪಾಲ್ಗೊಂಡಿದ್ದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next