Advertisement

ಸಾರ್ವತ್ರಿಕ ಆರೋಗ್ಯ ರಕ್ಷಣಾ ಯೋಜನೆಗೆ ತೀರ್ಮಾನ

03:45 AM Jun 16, 2017 | Team Udayavani |

ವಿಧಾನಸಭೆ: ಬಿಪಿಎಲ್‌, ಎಪಿಎಲ್‌ ಕುಟುಂಬ ಎಂಬ ಬೇಧವಿಲ್ಲದೆ ನಗರದಿಂದ ಗ್ರಾಮೀಣ ಭಾಗದವರೆಗೆ ಅಸಂಘಟಿತ ವಲಯದ ಕಾರ್ಮಿಕರು ಸೇರಿ ರಾಜ್ಯದ ಎಲ್ಲ 1,31,79,911 ಕುಟುಂಬಗಳಿಗೆ ಸಾರ್ವತ್ರಿಕ ಆರೋಗ್ಯ ರಕ್ಷಣಾ ಯೋಜನೆ ಜಾರಿಗೊಳಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ರಮೇಶ್‌ಕುಮಾರ್‌ ತಿಳಿಸಿದ್ದಾರೆ.

Advertisement

ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‌ನ ಗೋಪಾಲಯ್ಯ ಪ್ರಶ್ನೆಗೆ ಉತ್ತರಿಸಿದ ಅವರು, ಆರೋಗ್ಯ ಸೇವೆ ಒಂದೇ ಸೂರಿನಡಿ ಎಲ್ಲರಿಗೂ ಲಭ್ಯವಾಗಬೇಕು ಎಂಬ ಉದ್ದೇಶದಿಂದ ರಾಜ್ಯದ ಎಲ್ಲ ಜನರಿಗೂ “ಸಾರ್ವಜನಿಕ ಆರೋಗ್ಯ ಕಾರ್ಡ್‌’ ಒದಗಿಸಿ ಸೇವೆ ನೀಡುವುದು ಸರ್ಕಾರ ಉದ್ದೇಶವಾಗಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ವಾರ್ಷಿಕವಾಗಿ ಆರೋಗ್ಯ ಸೇವೆಗೆ 1072 ಕೋಟಿ ರೂ.ವರೆಗೆ ವೆಚ್ಚ ಮಾಡುತ್ತಿದೆ. ಜತೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 4 ಸಾವಿರ ಕೋಟಿ ರೂ. ಅನುದಾನ ಒದಗಿಸಲಾಗುತ್ತಿದೆ. ಬೇರೆ ಬೇರೆ ಬಾಬ್ತುಗಳಲ್ಲಿ ಹಣ ವೆಚ್ಚ ಮಾಡುವ ಬದಲಿಗೆ ರಾಜ್ಯ ಸರ್ಕಾರದಿಂದ ಅನುಷ್ಠಾನಗೊಂಡಿರುವ ವಿವಿಧ ಆರೋಗ್ಯ ಯೋಜನೆ ಒಗ್ಗೂಡಿಸಿ ಎಲ್ಲರಿಗೂ ಒಂದೇ ಕಡೆ ಸೇವೆ ನೀಡುವುದು ಸರ್ಕಾರದ ಗುರಿ. ಇದಕ್ಕಾಗಿ ಮೊದಲ ವರ್ಷ 796 ಕೋಟಿ ರೂ. ಅವಶ್ಯಕತೆ ಇದೆ ಎಂದರು.

ಖಾಸಗಿ ಆಸ್ಪತ್ರೆಯೊಂದಿಗೆ ಒಡಂಬಡಿಕೆ: ಫ‌ಲಾನುಭವಿಗಳಿಗೆ ಆರೋಗ್ಯ ಸೇವೆಸುಲಭವಾಗಿ ದೊರೆಯುವಂತಾಗಲು ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು, ಜಿಲ್ಲಾ ಆಸ್ಪತ್ರೆ, ವೈದ್ಯಕೀಯ ಕಾಲೇಜು, ಸರ್ಕಾರದೊಂದಿಗೆ ಒಡಂಬಡಿಕೆ ಮಾಡಿಕೊಂಡ ಖಾಸಗಿ ಆಸ್ಪತ್ರೆಗಳ ಮೂಲಕ ಚಿಕಿತ್ಸೆ ಕೊಡಿಸಲಾಗುವುದು. ಇದಕ್ಕೆ ಪೂರಕವಾಗಿಯೇ ಖಾಸಗಿ
ಆಸ್ಪತ್ರೆಗಳ ಮೇಲೆ ನಿಯಂತ್ರಣ ಹೊಂದುವ ವಿಧೇಯಕ ಸಹ ಸದನದಲ್ಲಿ ಮಂಡಿಸಲಾಗಿದೆ ಎಂದು ಹೇಳಿದರು.

ವೈದ್ಯರ ವೇತನದ ಬಗ್ಗೆ ಪರಿಶೀಲನೆ: ಕಾಂಗ್ರೆಸ್‌ನ ಶಿವಾನಂದ ಪಾಟೀಲ್‌ ಅವರ ಮತ್ತೂಂದು ಪ್ರಶ್ನೆಗೆ ಉತ್ತರಿಸಿದ ಸಚಿವರು, ತಜ್ಞ ವೈದ್ಯರ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಆದರೆ, ತಜ್ಞ ವೈದ್ಯರು ಕೆಲಸಕ್ಕೆ ಬರುತ್ತಿಲ್ಲ,
1.25 ಲಕ್ಷ ರೂ. ವೇತನ ನೀಡುತ್ತಿದ್ದೇವೆ ಎಂದು ಹೇಳಿದರು. 2 ಲಕ್ಷ ರೂ. ವೇತನ ಕೊಡುವ ಬಗ್ಗೆ ತೀರ್ಮಾನ ಕೈಗೊಂಡರೆ ತಜ್ಞ ವೈದ್ಯರು ಬರಬಹುದೇನೋ ಎಂದು ಶಿವಾನಂದ ಪಾಟೀಲ್‌ ಹೇಳಿದಾಗ, ತಜ್ಞ ವೈದ್ಯರು ಸರ್ಕಾರಿ ಕೆಲಸಕ್ಕೆ ಬರಲು ವೇತನ ಕಡಿಮೆ ಎಂಬುದೇ ಸಮಸ್ಯೆ, ಆದರೆ ಖಂಡಿತ ಆ ಬಗ್ಗೆಯೂ ಪರಿಶೀಲಿಸಲಾಗುವುದು ಎಂದರು.

Advertisement

ತಜ್ಞ ವೈದ್ಯರು ಸೇರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹು¨ªೆಗಳ ಪೈಕಿ 1659 ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಹು¨ªೆಗಳನ್ನು ವಿಶೇಷ ನೇಮಕಾತಿ ಸಮಿತಿಯಿಂದ ನೇಮಕ
ಮಾಡಿಕೊಳ್ಳಲಾಗುವುದು ಎಂದು ಹೇಳಿದರು.

1065 ತಜ್ಞರೂ ಹಾಗೂ 365 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹು¨ªೆಗಳನ್ನು ತುರ್ತಾಗಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಅಂತಿಮ ನೇಮಕಾತಿ ನಿಯಮಗಳನ್ನು ಹೊರಡಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದ ಅವರು ಖಾಲಿ ಇರುವ ಹು¨ªೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಆಯಾ ಜಿಲ್ಲಾಧಿಕಾರಿಗಳು/
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಅನುಮತಿ ನೀಡಲಾಗಿದೆ. 3274 ವಿವಿಧ ಅರೆವೈದ್ಯಕೀಯ
ಹು¨ªೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ ಎಂದು ವಿವರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next