Advertisement

ಕಾಂಕ್ರೀಟ್ ರಸ್ತೆ ಕಾಮಗಾರಿ ಕಳಪೆ: ಪ್ರತಿಭಟನೆ

11:48 AM Sep 09, 2019 | Suhan S |

ಅರಸೀಕೆರೆ: ನಗರದ ಸಾಯಿನಾಥ ರಸ್ತೆಯಲ್ಲಿ ಶಾಸಕರ ವಿಶೇಷ ಅನುದಾನದಡಿ ನಡೆಯುತ್ತಿರುವ ಕಾಂಕ್ರೀಟ್ ರಸ್ತೆಯ ಕಾಮಗಾರಿ ಅವೈಜ್ಞಾನಿಕ ವಾಗಿದ್ದು, ಅತ್ಯಂತ ಕಳಪೆ ಗುಣಮಟ್ಟದಲ್ಲಿ ಕಾಮಗಾರಿ ನಡೆಯುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರ ಅಧ್ಯಕ್ಷ ಕಿರಣ್‌ ಕುಮಾರ್‌ ನೇತೃತ್ವದಲ್ಲಿ ಕಾರ್ಯ ಕರ್ತರು ದಿಢೀರ್‌ ಪ್ರತಿಭಟನೆ ನಡೆಸಿದರು.

Advertisement

ಅವೈಜ್ಞಾನಿಕ ಕಾಮಗಾರಿ: ಈ ಸಂದರ್ಭದಲ್ಲಿ ಕಿರಣ್‌ ಕುಮಾರ್‌ ಮಾತನಾಡಿ, ಇತ್ತೀಚೆಗೆ ಶಾಸಕ ಕೆ.ಎಂ.ಶಿವಲಿಂಗೇಗೌಡರು ಶಾಸಕರ ವಿಶೇಷ ಅನುದಾನದಡಿಯಲ್ಲಿ ಹಾಗೂ ನಗರೋತ್ಥಾನ ಯೋಜನೆಯಡಿ ಕೋಟ್ಯಂತರ ರೂ. ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅಧಿಕೃತ ಚಾಲನೆ ನೀಡಿದ್ದಾರೆ. ಆದರೆ ಕಾಮಗಾರಿ ಅನುಷ್ಠಾನದ ಗುತ್ತಿಗೆ ಪಡೆದಿರುವ ಗುತ್ತಿಗೆದಾರರು ಮತ್ತು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮ (ಕೆಆರ್‌ಐಡಿಎಲ್)ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು ಮಾಡದೇ ಅವೈಜ್ಞಾನಿಕ ರೀತಿಯಲ್ಲಿ ಅತ್ಯಂತ ಕಳಪೆ ಗುಣ ಮಟ್ಟದ ಕಾಮಗಾರಿ ಮಾಡುತ್ತಿದ್ದು, ಕಾಮಗಾರಿಯ ಕ್ರಿಯಾ ಯೋಜನೆಯಲ್ಲಿ ನಮೂದಿ ಸಿರುವ ಗುಣ ಮಟ್ಟದ ಕಬ್ಬಿಣ ಮತ್ತು ಸಿಮೆಂಟ್ ಪ್ರಮಾಣವನ್ನು ಬಳಕೆ ಮಾಡುತ್ತಿಲ್ಲ ಎಂದು ಆರೋಪಿಸಿದರು.

ಗುತ್ತಿಗೆದಾರರೇ ನಾಪತ್ತೆ: ಜೇನುಕಲ್ ನಗರ ಮತ್ತು ಬಸವನಗುಡಿಯ ನಾಗಪ್ಪ ಗಲ್ಲಿಯಲ್ಲಿ ಅರ್ಧಂ ಬಧ‌ರ್ ಕಾಮಗಾರಿಯನ್ನು ಮಾಡಿ ಬಿಟ್ಟುಹೋಗಿ ರುವ ಗುತ್ತಿಗೆದಾರರು ತಿಂಗಳು ಕಳೆದರು ಪತ್ತೆಯಿಲ್ಲದೇ ಚರಂಡಿಗಳ ತುಂಬಾ ಮಣ್ಣಿನ ರಾಶಿ ತುಂಬಿಕೊಂಡಿದ್ದು, ಮಳೆಯ ಹಾಗೂ ಮನೆಯ ನೀರು ಸರಾಗವಾಗಿ ಮುಂದೆ ಸಾಗದೇ ರಸ್ತೆಯಲ್ಲಿ ಅಕ್ಕಪಕ್ಕದಲ್ಲಿ ನಿಂತು ಕಲುಷಿತಗೊಂಡು ದುರ್ವಾಸನೆ ಬೀರುತ್ತಿದೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯನ್ನು ಸಾರ್ವಜನಿಕರು ಅನುಭವಿಸುತ್ತಿದ್ದಾರೆ ಎಂದರು.

ಸಾರ್ವಜನಿಕರು ಈ ಬಗ್ಗೆ ಲಿಖೀತ ದೂರು ನೀಡಿದರೂ ನಗರಸಭೆ ಆಡಳಿತ ಸಂಬಂಧಪಟ್ಟ ಗುತ್ತಿಗೆದಾರರಿಂದ ಉತ್ತಮ ಗುಣಮಟ್ಟದ ಕಾಮಗಾರಿಯನ್ನು ನಿಗದಿತ ಸಮಯದಲ್ಲಿ ಮಾಡಿಸಲು ಸಂಪೂರ್ಣ ವಿಫ‌ಲವಾಗಿ ಎಂದು ದೂರಿದರು. ಇನ್ನಾದರೂ ನಗರಸಭೆ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಅತ್ಯಂತ ತ್ವರಿತವಾಗಿ ಉತ್ತಮ ಗುಣಮಟ್ಟದ ಕಾಮಗಾರಿ ಗಳನ್ನು ಮಾಡಿಸದಿದ್ದರೆ ಮುಂದಿನ ದಿನಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಕರವೇ ಕಾರ್ಯಕರ್ತರಾದ ಲೋಕೇಶ್‌, ದೀಲಿಪ್‌, ಪ್ರಸನ್ನ ಕುಮಾರ್‌, ಅರುಣ್‌, ಮಂಜು, ಯೋಗೀಶ್‌ ಹಾಗೂ ಇನ್ನಿತರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next