Advertisement

ವೇತನ ತಾರತಮ್ಯ ಖಂಡಿಸಿ ಗುತ್ತಿಗೆ ನೌಕರರ ಪ್ರತಿಭಟನೆ

02:16 PM Oct 07, 2019 | Suhan S |

ಬಳ್ಳಾರಿ: ವೇತನ ತಾರತಮ್ಯ ನೀತಿಯನ್ನು ಖಂಡಿಸಿ ಇಲ್ಲಿನ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೂರಾರು ಪೌರ ಕಾರ್ಮಿಕರು ಭಾನುವಾರ ಪ್ರತಿಭಟನೆ ನಡೆಸಿದ್ದಾರೆ.

Advertisement

ವಿಮ್ಸ್‌ ಆಸ್ಪತ್ರೆ ಆವರಣದಲ್ಲಿನ ವಿವಿಧ ಹಂತಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೊರಗುತ್ತಿಗೆ ನೌಕರರಿಗೆ ಸಮಾನ ವೇತನ ನೀಡದೇ, ಮನಸೋ ಇಚ್ಛೆಯಂತೆ ವೇತನ ಹೆಚ್ಚಳ ಮಾಡಿದ್ದಾರೆ. ಇದು ಗುತ್ತಿಗೆ ನೌಕರರನ್ನು ಕೆರಳಿಸಿದೆ. ಈ ಮೊದಲು ಸಮಾನ ಕೆಲಸಕ್ಕೆ ಸಮಾನ ವೇತನ ನಿಗದಿಪಡಿಸಿದ್ದ ವಿಮ್ಸ್‌ ಆಸ್ಪತ್ರೆಯ ಆಡಳಿತ ಮಂಡಳಿಯು ಇದೀಗ ತಾರತಮ್ಯ ನೀತಿಯನ್ನು ಅನುಸರಿಸುತ್ತಿದೆ.

ಆಸ್ಪತ್ರೆಯಲ್ಲಿನ ಶೌಚಾಲಯ ಸೇರಿದಂತೆ ಇನ್ನಿತರೆ ವಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ 13,807 ರೂ.ಗಳ ವೇತನ ನಿಗದಿಪಡಿಸಿದೆ. ವೈದ್ಯರ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಕೇವಲ 10,200 ರೂಗಳ ವೇತನ ನಿಗದಿಪಡಿಸಿದ್ದಾರೆ. ಹಾಗಾಗಿ, ಈ ವೇತನ ತಾರತಮ್ಯದಲ್ಲಾದ ಲೋಪದೋಷಗಳನ್ನು ಸರಿಪಡಿಸಬೇಕು ಎಂದು ಮಹಿಳಾ ಸಿಬ್ಬಂದಿ ಹೊರಗುತ್ತಿಗೆದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ನೂರಾರು ಗುತ್ತಿಗೆ ಪೌರ ಕಾರ್ಮಿಕರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next