Advertisement

ಪ್ರಿಯಾಂಕಾ ಬಂಧನಕ್ಕೆ ಖಂಡನೆ

11:25 AM Jul 21, 2019 | Suhan S |

ರಾಯಬಾಗ: ಅಖೀಲ ಭಾರತ ಕಾಂಗ್ರೆಸ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿರುವುದನ್ನು ಖಂಡಿಸಿ ರಾಯಬಾಗ ಬ್ಲಾಕ್‌ ಕಾಂಗ್ರೆಸ್‌ ಕಮಿಟಿ ಅಧ್ಯಕ್ಷ ಈರಗೌಡ ಪಾಟೀಲ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಸಿ, ತಹಶೀಲ್ದಾರ್‌ ಡಿ.ಎಚ್. ಕೋಮಾರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

Advertisement

ಕೆಲ ದಿನಗಳ ಹಿಂದೆ ಭೂ ಕಲಹಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸೋನಭದ್ರಾದಲ್ಲಿ ಒಂದೇ ಕುಟುಂಬದ ಹತ್ತು ಜನರ ಹತ್ಯೆ ಖಂಡಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರು ಮೃತರ ಕುಟುಂಬದವರಿಗೆ ಸಾಂತ್ವನ ಹೇಳಲು ಹೊರಟಾಗ ರಸ್ತೆಯಲ್ಲಿ ಅವರನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿರುವುದು ಕಾನೂನು ಬಾಹಿರವಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಉತ್ತರ ಪ್ರದೇಶ ಸರಕಾರದ ಧೋರಣೆ ಖಂಡಿಸಿದರು.

ಕೂಡಲೇ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಉತ್ತರ ಪ್ರದೇಶ ಸರಕಾರ ಮತ್ತು ಪೊಲೀಸರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ರಾಯಬಾಗ ಬ್ಲಾಕ್‌ ಕಾಂಗ್ರೆಸ್‌ ಕಮಿಟಿ ಅಧ್ಯಕ್ಷ ಈರಗೌಡ ಪಾಟೀಲ, ಮಹಾವೀರ ಮೊಹಿತೆ, ಅಪ್ಪಾಸಾಬ ಕುಲಗುಡೆ, ದಿಲೀಪ ಜಮಾದಾರ, ನಾಮದೇವ ಕಾಂಬಳೆ, ಕುಂತಿನಾಥ ಮಗದುಮ್‌, ಧೂಳಗೌಡ ಪಾಟೀಲ, ವಿಠuಲ ಬಂಡಗಾರ, ಮಾರುತಿ ನಾಯಿಕ, ಜಿನೇಶ್ವರ ಮಗದುಮ್ಮ, ಸುಭಾಷ ಕೋಟಿವಾಲೆ, ರಾಜು ಶಿರಗಾಂವೆ, ಶ್ರವಣ ಕಾಂಬಳೆ, ಸಿದ್ರಾಮ ಪೂಜಾರಿ, ಹಾಜಿ ಮುಲ್ಲಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next