Advertisement

ವಿದ್ಯುತ್‌ ದರ ಏರಿಕೆಗೆ ಖಂಡನೆ

05:53 AM Jun 04, 2020 | Lakshmi GovindaRaj |

ಮೈಸೂರು: ವಿದ್ಯುತ್‌ ಬಿಲ್‌ ಏರಿಕೆ ಹಾಗೂ ಖಾಸಗೀಕರಣ ವಿರೋಧಿಸಿ ಮೈಸೂರು ಕನ್ನಡ ವೇದಿಕೆ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ವೇದಿಕೆ ಅಧ್ಯಕ್ಷ ಬಾಲಕೃಷ್ಣ,  ಕೋವಿಡ್‌-19ರಿಂದ ಈಗಾಗಲೇ ತತ್ತರಿಸಿರುವ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ವಿದ್ಯುತ್‌ ಬಿಲ್‌ ಏರಿಸುವುದು ಸರಿಯಲ್ಲ. ಒಂದು ಕಡೆ ಬಡವರ ಹಾಗೂ ಮಧ್ಯಮ ವರ್ಗದವರ ಮೇಲೆ ಅನುಕಂಪ ಸುರಿಸುವುದು.

Advertisement

ಇನ್ನೊಂದೆಡೆ ಜನಪರ  ಯೋಜನೆಗಳನ್ನು ನೀಡುತ್ತೇವೆ ಎಂದು ಕೊಚ್ಚಿಕೊಳ್ಳುವುದು, ಮತ್ತೂಂದೆಡೆ ವಿದ್ಯುತ್‌ ಬಿಲ್‌ ಏರಿಸುತ್ತಿರುವುದು ರಾಜ್ಯ ಸರ್ಕಾರದ ದ್ವಂದ್ವ ನೀತಿಯನ್ನು ತೋರುತ್ತದೆ ಎಂದು ಆರೋಪಿಸಿದರು. ರಾಜ್ಯದ ಜನತೆ ಅವೈಜ್ಞಾನಿಕ ವಿದ್ಯುತ್‌  ಬಿಲ್‌ ದರ ಏರಿಕೆ ವಿರುದ ತಮ್ಮ ಅಸಮಾಧಾನ ವ್ಯಕ್ತಪಡಿಸಿದರೂ ಇದ್ಯಾವುದನ್ನೂ ಗಣನೆಗೆ ತೆಗೆದುಕೊಳ್ಳದೆ ಬಿಲ್‌ ಏರಿಕೆ ಮಾಡಿರುವುದು ಬಡವರು ಹಾಗೂ ಮಧ್ಯಮ ವರ್ಗದವರ ಬೆನ್ನಿಗೆ ಚೂರಿ ಹಾಕಿದಂತಾಗಿದೆ.

ಸಾಮಾನ್ಯ ಜನರ  ಆರ್ಥಿಕ ಸಂಕಷ್ಟ ಅರ್ಥ ಮಾಡಿಕೊಳ್ಳದ ಸರ್ಕಾರ ಪ್ರಜಾಪ್ರಭುತ್ವದ ಜನರ ಆಶೋತ್ತರಗಳಿಗೆ ತಕ್ಕಂತೆ ನಡೆಯುತ್ತಿದೆಯೇ ಎಂಬ ಅನುಮಾನ ಮೂಡುತ್ತದೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತು ಮತ್ತೂಮ್ಮೆ  ವಿದ್ಯುತ್‌ ದರ ಪರಿಷ್ಕರಣೆ ಮಾಡುವ ಮೂಲಕ ಜನರ ಕೆಂಗಣ್ಣಿಗೆ ಗುರಿಯಾಗುವುದರಿಂದ ತಪ್ಪಿಸಿಕೊಳ್ಳಬೇಕು.

ಬಡವರು ಹಾಗೂ ಮಧ್ಯಮ ವರ್ಗದವರು ತಮ್ಮ ದಿನನಿತ್ಯದ ಬದುಕನ್ನು ಸಾಗಿಸಲು ಕಷ್ಟ ಪಡುತ್ತಿರುವಾಗ ಇವೆಲ್ಲವೂ  ಸರ್ಕಾರಕ್ಕೆ ಅರಿವಿದ್ದರೂ ದುರದ್ದೇಶದ ಮೂಲಕ ಆರ್ಥಿಕ ಹೊರೆ ಹೇರುತ್ತಿರುವುದು ಎಷ್ಟರ ಮಟ್ಟಿಗೆ ಸರಿ. ಸರ್ಕಾರ ಕೂಡಲೇ ಈ ಜನವಿರೋಧಿ ನಿರ್ಧಾರವನ್ನು ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ  ಬೋಗಾದಿ ಸಿದ್ದೇಗೌಡ, ಪ್ಯಾಲೆಸ್‌ ಬಾಬು ಸೇರಿದಂತೆ ಇನ್ನಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next