Advertisement

ಆಸ್ಪತ್ರೆ ಕಟ್ಟಡ ತೆರವಿಗೆ ಖಂಡನೆ

03:48 PM Jul 20, 2019 | Team Udayavani |

ಬೈಲಹೊಂಗಲ: ಪಟ್ಟಣದ ಪುರಸಭೆ ವಾರ್ಡ್‌ ನಂ.19ರಲ್ಲಿರುವ ಸ್ವಾತಂತ್ರ್ಯ ಪೂರ್ವದ ಸರ್ಕಾರಿ ಆಸ್ಪತ್ರೆಯ ಕಟ್ಟಡಗಳನ್ನು ಕೆಡವಿ ಜಾಗೆಯನ್ನು ಪರಬಾರೆ ಮಾಡುತ್ತಿರುವುದನ್ನು ಖಂಡಿಸಿ ಸಾರ್ವಜನಿಕರು ದಿಢೀರ್‌ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ಅವರಿಗೆ ಮನವಿ ಸಲ್ಲಿಸಿದರು.

Advertisement

ಐತಿಹಾಸಿಕ ಹಿನ್ನೆಲೆಯುಳ್ಳ ಸರ್ಕಾರಿ ಆಸ್ಪತ್ರೆಯ ಕಟ್ಟಡ, ವಸತಿ ಗೃಹಗಳನ್ನು ಏಕಾಏಕಿ ಬಂದು ಜೆಸಿಬಿ ಮೂಲಕ ಕೆಡವಲು ಮುಂದಾಗಿರುವುದು ಸರಿಯಲ್ಲ. ಇದರಿಂದ ಇತಿಹಾಸದ ಪುಟಗಳಲ್ಲಿರುವ ಆಸ್ಪತ್ರೆಯ ಹೆಸರು, ಕಟ್ಟಡ ಸಂಪೂರ್ಣ ನಾಶವಾಗುತ್ತದೆ. ಇದ್ದ ಕಟ್ಟಡವನ್ನು ಸರಿಯಾಗಿ ನಿರ್ವಹಿಸಿಕೊಂಡು ಹೋಗಿ ಬಡ ರೋಗಿಗಳಿಗೆ ವೈದ್ಯಕೀಯ ಚಿಕಿತ್ಸೆಯ ಅನುಕೂಲ ಕಲ್ಪಿಸಿಕೊಡಬೇಕು. ಅದನ್ನು ಬಿಟ್ಟು ಸುಸಜ್ಜಿತ ಹಳೆಯ ಕಟ್ಟಡಗಳನ್ನು ಕೆಡವಲು ಹೊರಟ್ಟಿರುವುದು ಅನ್ಯಾಯದ ಕ್ರಮವಾಗಿದೆ ಎಂದು ಆರೋಪಿಸಿದರು.

ಈ ವೇಳೆ ಜೆಸಿಬಿ ಚಾಲಕರನ್ನು ತೀವ್ರ ತರಾಟೆ ತೆಗೆದುಕೊಂಡ ಸಾರ್ವಜನಿಕರು, ರಸ್ತೆ ಮಧ್ಯೆ, ಜೆಸಿಬಿಗೆ ಅಡ್ಡಲಾಗಿ ಮಲಗಿ ಯಾವುದೇ ಕಾರಣಕ್ಕೂ ಸರ್ಕಾರಿ ಆಸ್ಪತ್ರೆಯ ಹಳೆಯ ಕಟ್ಟಡವನ್ನು ಕೆಡವಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು. ತಕ್ಷಣ ಸಂಬಂಧಪಟ್ಟ ಅಧಿಕಾರಿಗಳಿಗೆ ಮೊಬೈಲ್ ಕರೆ ಮಾಡಿ ಸಂಪರ್ಕಿಸಲು ಮುಂದಾದರು. ಅಧಿಕಾರಿಗಳು ಸಂಪರ್ಕಕ್ಕೆ ಸಿಗದಿದ್ದರಿಂದ ಆಸ್ಪತ್ರೆ ಆವರಣದಿಂದ ಎಸಿ ಕಚೇರಿಗೆ ತೆರಳಿದರು. ಪುರಸಭೆ ಮಾಜಿ ಸದಸ್ಯ ಶಿವಯೋಗಿ ಹುಲ್ಲೆನ್ನವರ ಮಾತನಾಡಿ, ಆಸ್ಪತ್ರೆ ಕಟ್ಟಡ ಕೆಡವಿರುವ ಬಗ್ಗೆ ಪುರಸಭೆ ಮುಖ್ಯಾಧಿಕಾರಿಗಳನ್ನು ವಿಚಾರಿಸಿದರೆ ತಮಗೇನು ಗೊತ್ತಿಲ್ಲ ಎಂದು ಸುಳ್ಳು ಹೇಳಿ ಜಾರಿಕೊಳ್ಳುತ್ತಿದ್ದಾರೆ. ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಕೊಳ್ಳಬೇಕು ಎಂದು ಎಚ್ಚರಿಸಿದರು. ವಿಠuಲ ಬಾಗಲೆ, ಪುಂಡಲೀಕ ಭಜಂತ್ರಿ, ವಿವೇಕಾನಂದ ಪೂಜೇರ, ಸದಾನಂದ ಕೋಟಗಾರ ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next