Advertisement

ಸಚಿವ ರವಿ ಹೇಳಿಕೆ ಖಂಡಿಸಿ ಧರಣಿ

03:35 PM Jan 07, 2020 | Suhan S |

ಶಿವಮೊಗ್ಗ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಕನ್ನಡಪರ ಸಂಘಟನೆಗಳಿಗೆ ಕೆಟ್ಟ ಪದ ಬಳಸಿದ್ದು, ಇವರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಜಯ ಕರ್ನಾಟಕ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

Advertisement

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಕಾರ್ಯಕ್ರಮವೊಂದರಲ್ಲಿ ಕನ್ನಡ ಪರ ಸಂಘಟನೆಗಳ ವಿಚಾರವಾಗಿ ಮಾತನಾಡುವ ಸಂದರ್ಭದಲ್ಲಿ ಸಂಘಟನೆಗಳು ತುಕಡೆ ಗ್ಯಾಂಗ್‌ ಗಳೆಂದು ನಿಂಧಿಸಿ ಕರ್ನಾಟಕದ ನೆಲ, ಜಲ, ಭಾಷೆ, ಸಂಸ್ಕೃತಿಗೋಸ್ಕರ ಹೋರಾಟ ಮಾಡುವ ಎಲ್ಲ ಕನ್ನಡಪರ ಹೋರಾಟಗಾರರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿದರು.

ಕಳೆದ ನವೆಂಬರ್‌ 1 ರಂದು ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದ ಆ ದಿನವೇ ಸಚಿವ ಸಿ.ಟಿ.ರವಿಯವರು ಕನ್ನಡ ಧ್ವಜಾರೋಹಣ ಕಾರ್ಯಕ್ರಮಕ್ಕೆ ಭಾಗವಹಿಸದೇ ಕನ್ನಡ ಧ್ವಜಕ್ಕೆ , ಕನ್ನಡಾಂಬೆಗೆ ಅವಮಾನ ಮಾಡಿದ್ದಾರೆ. ಇವರ ವಿರುದ್ಧ ಕಪ್ಪು ಬಾವುಟ ತೋರಿಸಿದ ಕೆಲವರ ವಿರುದ್ಧ ಯಾವುದೇ ಹೇಳಿಕೆ ನೀಡದೇ ಪರೋಕ್ಷವಾಗಿ ಬೆಂಬಲಿಸಿರುವುದು ಇದರಿಂದ ತಿಳಿಯುತ್ತದೆ ಎಂದು ಪ್ರತಿಭಟನಾರರು ಮನವಿಯಲ್ಲಿ ತಿಳಿಸಿದ್ದಾರೆ.

ಈ ಕೂಡಲೇ ಸಚಿವರು ತಮ್ಮ ತಪ್ಪನ್ನು ಒಪ್ಪಿಕೊಂಡು ಕನ್ನಡಿಗರ ಕ್ಷಮೆ ಕೋರಬೇಕು. ಮುಂದೆ ಈ ರೀತಿಯ ತಪ್ಪುಗಳನ್ನು ಮಾಡಬಾರದು. ಇದೇ ಧೋರಣೆ ಮುಂದುವರಿದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಒತ್ತಾಯಿಸಲಾಗುವುದು ಎಂದು ಎಚ್ಚರಿಸಿದರು. ಮಂಜುನಾಥ ಶೆಟ್ಟಿ, ಸುರೇಶ್‌ ಶೆಟ್ಟಿ ಸೇರಿದಂತೆ ಹಲವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next