Advertisement

ಬಡವರ ಬಂಧು: ಷರತ್ತು ಸಡಿಲಿಕೆ 

01:23 AM Jan 26, 2019 | Team Udayavani |

ಬೆಂಗಳೂರು: ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡುವ “ಬಡವರ ಬಂಧು’ ಯೋಜನೆಯಡಿ ಸಾಲ ಪಡೆಯಲು ಬಿಪಿಎಲ್‌ ಕಾರ್ಡ್‌ ಕಡ್ಡಾಯ ಎಂಬ ಷರತ್ತನ್ನು ಸಡಿಲಿಸಲಾಗಿದೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಂಶೆಪೂರ್‌ ತಿಳಿಸಿದ್ದಾರೆ. 

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಮುಖವಾಗಿ ಬೀದಿ ಬದಿ ವ್ಯಾಪಾರಿಗಳಿಗೆ ಸ್ಥಳೀಯ ಸಂಸ್ಥೆಗಳ ಗುರುತಿನ ಚೀಟಿ ಹಾಗೂ ರೇಷನ್‌ ಕಾಡ್‌ìನ್ನು ದಾಖಲೆಯಾಗಿ ತೋರಿಸುವುದು ಕಡ್ಡಾಯವಾಗಿತ್ತು. ಆದರೆ, ಇದೀಗ ಬೀದಿ ಬದಿ ವ್ಯಾಪಾರ ಮಾಡುತ್ತಿರುವರ ಪೋಟೋ ಪಡೆದು ಅದರ ಆಧಾರದ ಮೇಲೆಯೇ ಸಾಲ ನೀಡುವಂತೆ ಬ್ಯಾಂಕುಗಳಿಗೆ ನಿರ್ದೇಶನ ನೀಡಲಾಗಿದೆ.

ಇನ್ನು 15 ದಿನಗಳಲ್ಲಿ ರಾಜ್ಯದ 50 ಸಾವಿರ ಬೀದಿ ಬದಿ ವ್ಯಾಪಾರಿಗಳಿಗೆ ಯೋಜನೆಯ ಲಾಭ ಸಿಗಲಿದೆ. ಮುಂದಿನ ದಿನಗಳಲ್ಲಿ 4 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next