ಮೈಸೂರು: ಜಿಲ್ಲಾ ವ್ಯಾಪ್ತಿಯ ಎಲ್ಲಾ ಧಾರ್ಮಿಕ ಕೇಂದ್ರಗಳನ್ನು ಜೂ.8ರಿಂದ ಷರತ್ತಿಗೆ ಒಳಪಟ್ಟು ತೆರೆಯಲು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅನುಮತಿ ನೀಡಿದ್ದಾರೆ. ಧಾರ್ಮಿಕ ಕೇಂದ್ರಗಳಲ್ಲಿ ಕೋವಿಡ್ 19 ಸೋಂಕು ತಡೆಗೆ ಮುಂಜಾಗ್ರತಾ ಷರತ್ತುಗಳನ್ನು ವಿಧಿಸಿದೆ. ಕಂಟೈನ್ಮೆಂಟ್ ವಲಯಗಳಲ್ಲಿನ ಧಾರ್ಮಿಕ ಕೇಂದ್ರ, ಪೂಜಾ ಸ್ಥಳಗಳು, ಆಧ್ಯಾತ್ಮಿಕ ಕೇಂದ್ರಗಳನ್ನು ತೆರೆಯುವಂತಿಲ್ಲ.
ದೇಗುಲ ಗಳಲ್ಲಿ ದೇವರ ದರ್ಶನಕ್ಕೆ ಹೋಗುವ ಭಕ್ತರು, ಮಾಸ್ಕ್ ಧರಿಸಬೇಕು. ಸಾಬೂನಿನಿಂದ ಕೈತೊಳೆಯಲು ಹಾಗೂ ಸ್ಯಾನಿಟೈಸರ್ ಉಪಯೋಗಿಸಲು ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.ದೇವಾಲಯಗಳಲ್ಲಿ ಕೋವಿಡ್-19 ವೈರಾಣು ಬಗ್ಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಶಾಶ್ವತ ಫಲಕ ಅಳವಡಿಸುವುದು ಹಾಗೂ ವಿಡಿಯೋ-ಆಡಿಯೋ ಕ್ಲಿಪ್‌ಗ್ಳ ಮೂಲಕ ಪ್ರಚಾರ ಮಾಡಬೇಕು.
ಭಕ್ತಾದಿಗಳು ತಮ್ಮ ಶೂ, ಚಪ್ಪಲಿಗಳನ್ನು ಅವರು ಬಂದಿರುವ ವಾಹನದಲ್ಲೇ ಬಿಡಬೇಕು. ಸರದಿಯಲ್ಲಿ ಆರು ಅಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕ್ರಮ ವಹಿಸಬೇಕು. ಪ್ರವೇಶ ಹಾಗೂ ನಿರ್ಗಮನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು. ವಿಗ್ರಹಗಳು ಹಾಗೂ ಪವಿತ್ರ ಗ್ರಂಥಗಳು ಮುಟ್ಟುವುದನ್ನು ನಿಷೇಧಿಸಲಾಗಿದೆ. ದೇಗುಲಗಳನ್ನು ಕ್ರಿಮಿನಾಶಕ ಬಳಸಿ ಆಗಾಗ್ಗೆ ಶುಚಿಗೊಳಿಸಬೇಕು. ಭಕ್ತರಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶವಿದ್ದು, ಸೇವೆಗಳಿಗೆ ಅವಕಾಶವಿರು ವುದಿಲ್ಲ. ಹೂ, ಹಣ್ಣು, ಕಾಯಿ ಮುಂತಾದ ಪೂಜಾ ಸಾಮಗ್ರಿ ತರುವಂತಿಲ್ಲ.
ಪ್ರಸಾದ, ತೀರ್ಥ ನೀಡುವು ದಿಲ್ಲ.65 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ಹಾಗೂ 10 ವರ್ಷ ಕೆಳಗಿನ ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ಪ್ರವೇಶ ನಿಷೇಧಿಸಲಾಗಿದೆ. ದೇವಾಲಯದ ವಸತಿಗೃಹದಲ್ಲಿ ತಂಗಲು ಅವಕಾಶವಿರುವು ದಿಲ್ಲ. ಅಲ್ಲದೆ ಸದ್ಯದ ಮಟ್ಟಿಗೆ ದಾಸೋಹ ನಡೆಸಲು ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.