Advertisement

ಸಿಂಘು ಗಡಿಯಲ್ಲಿ ಮೃತಪಟ್ಟ ರೈತರಿಗೆ ಚಿತ್ರದುರ್ಗ ಜಿ.ಪಂ ಸಭೆಯಲ್ಲಿ ಶ್ರದ್ಧಾಂಜಲಿ

12:50 PM Feb 18, 2021 | Team Udayavani |

ಚಿತ್ರದುರ್ಗ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಮೃತರಾದ ರೈತರಿಗೆ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಗುರುವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು.

Advertisement

ಸಭೆ ಆರಂಭ ಆಗುತ್ತಿದ್ದಂತೆ ಎದ್ದು ನಿಂತ ಕಾಂಗ್ರೆಸ್ ಸದಸ್ಯ ಕೃಷ್ಣಮೂರ್ತಿ ಅವರು ಶ್ರದ್ಧಾಂಜಲಿ ಸಲ್ಲಿಸುವ ವಿಷಯ ಪ್ರಸ್ತಾಪಿಸಿದರು. ಇದಕ್ಕೆ ಬಿಜೆಪಿ ಸದಸ್ಯ ಅಜ್ಜಪ್ಪ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ವಾಗ್ವಾದ ನಡೆದು ಕೆಲ ಕಾಲ ಗದ್ದಲ ಉಂಟಾಯಿತು.

ಇದನ್ನೂ ಓದಿ:ನೂತನ ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ: ಇಂದು ರೈತರಿಂದ ದೇಶಾದ್ಯಂತ 4 ತಾಸು ರೈಲು ತಡೆ

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು ಮಾತನಾಡಿ, ರೈತರು ದೇಶದ ಬೆನ್ನೆಲುಬು. ಇಂದು ಕೃಷಿ ಕ್ಷೇತ್ರ ಆತಂಕದಲ್ಲಿದೆ‌. ದೆಹಲಿ ಗಡಿಯಲ್ಲಿ ಹೋರಾಟ ಮಾಡುತ್ತಿರುವ ರೈತರನ್ನು ಗೌರವಿಸೋಣ. ಇದರಲ್ಲಿ ರಾಜಕೀಯ ಮಾಡಬಾರದು ಎಂದು ಮನವಿ ಮಾಡಿದರು.

ರೈತರ ಬಗ್ಗೆ ಗೌರವ ಹಾಗೂ ಕಾಳಜಿ ಇರುವವರು ಶ್ರದ್ಧಾಂಜಲಿ ಸಲ್ಲಿಸಿ. ರೈತರ ಬಗ್ಗೆ ಕಾಳಜಿ ಇಲ್ಲದವರು ಕುಳಿತುಕೊಳ್ಳಿ ಎಂದು ಕಾಂಗ್ರೆಸ್ ಸದಸ್ಯ ಪ್ರಕಾಶ ಮೂರ್ತಿ ಹೇಳಿದರು. ಬಳಿಕ ಎಲ್ಲರೂ ಎದ್ದುನಿಂತು ಶ್ರದ್ಧಾಂಜಲಿ ಸಲ್ಲಿಸಿದರು.

Advertisement

ಆನಂತರ ಕೇಂದ್ರದ ಕೃಷಿ ಕಾಯ್ದೆಗಳ ಬಗ್ಗೆ ಪರ ವಿರೋಧ ಚರ್ಚೆ ನಡೆಯಿತು. ಸದಸ್ಯ ಕೃಷ್ಣಮೂರ್ತಿ ಮಾತನಾಡಿ, ರೈತರನ್ನು ಕತ್ತಲಲ್ಲಿಟ್ಟು ಕಾಯ್ದೆ ಜಾರಿ ಮಾಡಲಾಗುತ್ತಿದೆ ಇದು ಖಂಡನೀಯ ಎಂದರು.

ಮಂಡಿ ವ್ಯವಸ್ಥೆ ರದ್ದು ಮಾಡುವ ಹುನ್ನಾರ ನಡೆಯುತ್ತಿದೆ. ಮಂಡಿಯಿಂದಲೇ ರೈತ ಎನ್ನುವುದನ್ನು ಅರ್ಥ ಮಾಡಿಕೊಳ್ಳಲಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next