Advertisement

ಎಸ್.ಕೆ.ಭಗವಾನ್ ನಿಧನ: ಸಿದ್ದರಾಮಯ್ಯ, ಸಿಎಂ ಬೊಮ್ಮಾಯಿ ಸೇರಿ ಹಲವರಿಂದ ಸಂತಾಪ

11:39 AM Feb 20, 2023 | Team Udayavani |

ಬೆಂಗಳೂರು:  ಕನ್ನಡದ ಮೇರು ಪ್ರತಿಭೆ ಎಸ್.ಕೆ.ಭಗವಾನ್ ಅವರ ನಿಧನಕ್ಕೆ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

Advertisement

ಕನ್ನಡ ಕಲಾ ಜಗತ್ತು ಮತ್ತು ಸಿನಿಮಾ ಪ್ರಪಂಚವನ್ನು ಬೆಳಗಿ ಬೆಳ್ಳೆತೆರೆಯನ್ನು ಶ್ರೀಮಂತಗೊಳಿಸಿದ್ದ ಕನ್ನಡದ ಹಿರಿಮೆಯೂ ಆಗಿದ್ದ ಶ್ರೀನಿವಾಸ ಕೃಷ್ಣ ಅಯ್ಯಂಗಾರ್ (ಎಸ್.ಕೆ.ಭಗವಾನ್) ಅವರ ನಿಧನ ಅತ್ಯಂತ ಬೇಸರ ತರಿಸಿದೆ.

ನನ್ನ ಆತ್ಮೀಯರೂ ಆಗಿದ್ದ ಇವರನ್ನು ನಾನಾ ಸಂದರ್ಭಗಳಲ್ಲಿ ಭೇಟಿಯಾಗುವ ಅವಕಾಶ ಹತ್ತಾರು ಬಾರಿ ಒದಗಿ ಬಂದಿತ್ತು. 90 ವರ್ಷ ವಯಸ್ಸಿನ ಇವರು ವಯೋಸಹಜ ಆರೋಗ್ಯ ಸಮಸ್ಯೆಗಳನ್ನು ಹೊಂದಿದ್ದರು. ಕನ್ನಡ ರಂಗಭೂಮಿ ಮೂಲಕ ಸಿನಿಮಾ ರಂಗ ಪ್ರವೇಶಿಸಿ ಬೆಳ್ಳಿ ಪರದೆಯನ್ನು ಶ್ರೀಮಂತಗೊಳಿಸಿದ ಭಗವಾನ್ ಅವರು ತಮ್ಮ 65 ವರ್ಷಗಳ ಸುದೀರ್ಘ ಸಿನಿಮಾ ಸಾಹಸಗಳಲ್ಲಿ 28ಕ್ಕೂ ಹೆಚ್ಚು ಕನ್ನಡ ಕಾದಂಬರಿಗಳನ್ನು ಬೆಳ್ಳಿ ಪರದೆಗೆ ತಂದ ಕೀರ್ತಿ ಹೊಂದಿದ್ದಾರೆ.

ಭಗವಾನ್ ನಿರ್ದೇಶನದಲ್ಲಿ ಅರಳಿದ “ಕಸ್ತೂರಿ ನಿವಾಸ, ಸಂಧ್ಯಾರಾಗ, ಬಯಲುದಾರಿ, ಹೊಸ ಬೆಳಕು, ಬೆಂಕಿಯ ಬಲೆ…” ಮುಂತಾದ ಹಲವು ಸಿನಿಮಾಗಳು ಈಗಲೂ ನನ್ನ ನೆನಪಿನಲ್ಲಿ ಉಳಿದಿವೆ. ಸಿನಿಮಾ ನಿರ್ದೇಶನಕ್ಕೆ ಪೂರ್ಣವಿರಾಮ ಹಾಕಿದ ಬಳಿಕ “ಆದರ್ಶ ಸಿನಿಮಾ ಇನ್ಸ್ಟಿಟ್ಯೂಟ್”ನ ಪ್ರಾಂಶುಪಾಲರಾಗಿ ಇವರು ತಮ್ಮ ತಿಳಿವಳಿಕೆ, ಜ್ಞಾನ ಮತ್ತು ಅನುಭವವನ್ನು ಹೊಸ ತಲೆಮಾರಿನ ಕಲಾಸಕ್ತರಿಗೂ ವರ್ಗಾಯಿಸುವ ಮೂಲಕ ಕನ್ನಡದ ಜ್ಞಾನವನ್ನು ಹೆಚ್ಚಿಸಿದ್ದಾರೆ ಎಂದು ಪ್ರಾರ್ಥಿಸುತ್ತೇನೆ.

ತಮ್ಮ ಕಲಾ ಶ್ರೀಮಂತಿಕೆಯ ಕಾರಣಕ್ಕೆ ಭಗವಾನ್ ಅವರು ಕನ್ನಡ ಭಾಷೆ ಇರುವವರೆಗೂ ಕನ್ನಡ ಮಣ್ಣಿನಲ್ಲಿ ಅಜರಾಮರವಾಗಿ ಉಳಿಯುತ್ತಾರೆ ಎಂದು ಹೇಳುತ್ತಾ ಹಿರಿಯ ಪ್ರತಿಭೆಗೆ ಶ್ರದ್ಧಾಂಜಲಿಯನ್ನು ಅರ್ಪಿಸುತ್ತೇನೆ ಎಂದಿದ್ದಾರೆ.

Advertisement

ಸಿಎಂ ಬೊಮ್ಮಾಯಿ ಸಂತಾಪ:  

ಕನ್ನಡ ಚಲನಚಿತ್ರರಂಗದ ಖ್ಯಾತ ನಿರ್ದೇಶಕ ಶ್ರೀ ಎಸ್. ಕೆ. ಭಗವಾನ್ ರವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ಅತ್ಯಂತ ಬೇಸರವಾಯಿತು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಕುಟುಂಬವರ್ಗದವರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ದೊರೈ-ಭಗವಾನ್ ಜೋಡಿಯು ಕನ್ನಡ ಚಿತ್ರರಂಗಕ್ಕೆ ಅನೇಕ ಸದಭಿರುಚಿಯ ಚಿತ್ರಗಳನ್ನು ನೀಡಿದೆ. ಡಾ. ರಾಜ್‌ ಕುಮಾರ್ ನಟನೆಯ  ‘ಕಸ್ತೂರಿ ನಿವಾಸ’, ‘ಎರಡು ಕನಸು’, ‘ಬಯಲು ದಾರಿ’, ‘ಗಿರಿ ಕನ್ಯೆ’, ‘ಹೊಸ ಬೆಳಕು’ ಸೇರಿದಂತೆ 55 ಚಿತ್ರಗಳನ್ನು ಸ್ನೇಹಿತ ದೊರೈ ರಾಜ್‌ ಜೊತೆ ಸೇರಿ ನಿರ್ದೇಶಿಸಿದ್ದರು. ಓಂ ಶಾಂತಿಃ ಎಂದು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next