ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶಿವರಾಂ ಅವರ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿವರಾಂ ಅವರು ಇಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದು, ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ಕಲಾವಿದ ಶಿವರಾಂ ಅವರ ನಿಧನ ತುಂಬಾ ದುಃಖದ ವಿಷಯ. ಶಿವರಾಂ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ:ಶಿವರಾಮ್ ನಟರಷ್ಟೇ ಅಲ್ಲ, ಸ್ಟಾರ್ ನಟರ ಸಿನಿಮಾ ನಿರ್ಮಾಪಕ, ನಿರ್ದೇಶಕರೂ ಆಗಿ ಮನಗೆದ್ದಿದ್ರು…
ಕನ್ನಡದ ಹಿರಿಯ ಕಲಾವಿದ, ಚಿತ್ರ ನಿರ್ಮಾಪಕ ಶಿವರಾಂ ಅವರ ನಿಧನ ಬಹಳ ನೋವು ತಂದಿದೆ. ಆರು ದಶಕಗಳಿಂದ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿರುವ ಅವರು ಸಾಮಾಜಿಕ ಸಂದೇಶಗಳನ್ನು ಸಾರುವ ಚಿತ್ರಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬ, ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಸಂತಾಪ ಸೂಚಿಸಿದ್ದಾರೆ.
– Araga Jnanendra (@aragajnanendra) 4 Dec 2021
ತಮ್ಮ ಮನೋಜ್ಞ ಅಭಿನಯದ ಮೂಲಕ ಎಲ್ಲರ ಮೆಚ್ಚುಗೆ ಪಾತ್ರರಾಗಿದ್ದ ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಶಿವರಾಂ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ಆಘಾತವಾಯಿತು. ಬಹುಮುಖ ಪ್ರತಿಭೆಯಾಗಿದ್ದ ಅವರ ನಿಧನ ಚಿತ್ರರಂಗಕ್ಕೆ ತುಂಬಲಾರದ ನಷ್ಟ. ಭಗವಂತನು ಅವರ ಆತ್ಮಕ್ಕೆ, ಸದ್ಗತಿ ನೀಡಿ, ಕುಟುಂಬದವರು ಮತ್ತು ಅಭಿಮಾನಿಗಳಿಗೆ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಕೂ ಮಾಡಿದ್ದಾರೆ.
– Murugesh R Nirani (@murugesh_nirani) 4 Dec 2021
ಕನ್ನಡ ಚಲನಚಿತ್ರ ರಂಗದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕರೂ ಆದಂತಹ ಶಿವರಾಂ ಅವರು ನಿಧನ ಹೊಂದಿರುವ ಸುದ್ಧಿ ನಿಜಕ್ಕೂ ದುಃಖಕರ. ಕನ್ನಡ ಚಿತ್ರರಂಗಕ್ಕೆ ಹಾಗೂ ಕನ್ನಡ ನಾಡಿಗೆ ಅವರ ಅಗಲಿಕೆಯಿಂದ ನಷ್ಟವಾಗಿದೆ.! ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಶಾಸಕ ಎಸ್ ಎ ರಾಮದಾಸ್ ಕೂ ಮಾಡಿದ್ದಾರೆ.
– SA Ramadass (@Ramadassmysuru) 4 Dec 2021