ಹಾವೇರಿ: ಜಿಲ್ಲೆಯಲ್ಲಿ ಮೇ 21 ಮತ್ತು 22ರಂದು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ (ಸಿಇಟಿ) ನಡೆಯಲಿವೆ. ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ಪಾರದರ್ಶಕವಾಗಿ ನಡೆಸಲು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಪರೀಕ್ಷೆ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು. ಪರೀಕ್ಷಾ ಕೇಂದ್ರಗಳಿಗೆ ಸಿಸಿ ಕ್ಯಾಮರಾ ಅಳವಡಿಸಲಾಗುತ್ತಿದೆ. ಪರೀಕ್ಷೆಗಳಲ್ಲಿ ಅಕ್ರಮಗಳು ನಡೆದಿರುವುದು ಕಂಡುಬಂದಲ್ಲಿ ನಿರ್ದಾಕ್ಷಣ್ಯ ಕ್ರಮ ಜರುಗಿಸಲಾಗುವುದೆಂದು ಎಚ್ಚರಿಸಿದರು. ಸಿಇಟಿ ಪರೀಕ್ಷೆಗೆ ಒಟ್ಟು 7 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುತ್ತಿದೆ.
ಈ ವ್ಯಾಪ್ತಿಯಲ್ಲಿ ಪರೀಕ್ಷಾ ಅವಧಿಯಲ್ಲಿ ಝರಾಕ್ಸ್ ಅಂಗಡಿಗಳನ್ನು ಮುಚ್ಚಿಸಲಾಗುತ್ತಿದೆ. ಅಲ್ಲದೇ, ಪರೀಕ್ಷಾರ್ಥಿಗಳು ಯಾವುದೇ ತರಹದ ಮೊಬೈಲ್, ಬ್ಲೂಟೂತ್, ವಾಚ್ ಸೇರಿದಂತೆ ಇತರೆ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವುದನ್ನು ಸಂಪೂರ್ಣ ನಿಷೇ ಧಿಸಲಾಗಿದೆ ಎಂದು ತಿಳಿಸಿದರು.
ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪಲ್ಸ್ ಆಕ್ಸಿಮೀಟರ್ ಮತ್ತು ಥರ್ಮಲ್ ಸ್ಕ್ಯಾನರ್ ಪೂರೈಸುವುದು. ಕೋವಿಡ್ ರೋಗ ಲಕ್ಷಣವಿರುವ ಅಭ್ಯರ್ಥಿಗಳಿಗೆ ಪಲ್ಸ್ ಆಕ್ಸಿಮೀಟರ್‌ನಿಂದ ಆಕ್ಸಿಜನ್ ಲೆವೆಲ್ ಪರೀಕ್ಷಿಸಬೇಕೆಂದು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
Related Articles
ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ನಿಯೋಜಿತ ಸಿಬ್ಬಂದಿಗೆ ಕಡ್ಡಾಯವಾಗಿ ಗುರುತಿನ ಚೀಟಿ ನೀಡಲು ಸೂಚಿಸಿದರು. ಪರೀಕ್ಷೆಗಳನ್ನು ಸುಸೂತ್ರ ವಾಗಿ ನಡೆಸಲು ಮೇಲುಸ್ತುವಾರಿಗಾಗಿ ತ್ರಿ-ಸದಸ್ಯ ಸಮಿತಿ ರಚಿಸಲಾಗಿದೆ. ಗೌಪ್ಯ ಸಾಮಗ್ರಿಗಳ ಅಭಿರಕ್ಷೆ, ವಿತರಣಾ ಸಮಿತಿ ಸಹ ರಚಿಸಲಾಗಿದ್ದು, ಪ್ರಶ್ನೆ ಪತ್ರಿಕೆ ಮಾರ್ಗಾ ಧಿಕಾರಿ, ಸಿಟಿಂಗ್ ಸ್ಕ್ಯಾಡ್, ಪರೀಕ್ಷಾ ಕೇಂದ್ರದ ನಿಯಂತ್ರಣಾ ಧಿಕಾರಿಗಳು ಹಾಗೂ ಮೇಲ್ವಿಚಾರಕರನ್ನು ಮತ್ತು ಮೊಬೈಲ್ ಸ್ವಾಧೀನಾಧಿ ಕಾರಿಗಳು, ಪರೀಕ್ಷಾ ಕೇಂದ್ರಕ್ಕೆ ಪೊಲೀಸರನ್ನು ನಿಯೋಜಿಸಲಾಗಿದೆ ಎಂದರು.
ಶಿಕ್ಷಣ ಇಲಾಖೆ ಪ್ರೊಜೆಕ್ಟ್ ಕೋಆರ್ಡಿನೆಟರ್ ಎ.ಎ.ಅಡಿಗ ಮಾತನಾಡಿ, ಮೇ 21ರಂದು ಪ್ರಥಮ ಅ ಧಿವೇಶನಕ್ಕೆ 1924, ದ್ವಿತೀಯ ಅ ಧಿವೇಶನದಲ್ಲಿ 199 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮೇ 22ರಂದು ಪ್ರಥಮ ಹಾಗೂ ದ್ವಿತೀಯ ಅಧಿವೇಶನಕ್ಕೆ 1834 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎರಡು ಅವ ಧಿಯಲ್ಲಿ ಪರೀಕ್ಷೆ ನಡೆಯಲ್ಲಿದ್ದು, ಬೆಳ್ಳಗೆ 10 ಗಂಟೆಯಿಂದ 11 ಗಂಟೆ ಮತ್ತು ಮಧ್ಯಾಹ್ನ ಗಂಟೆ 2.30 ರಿಂದ 5.30 ವರೆಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು. ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಎಸ್.ಜಗದೀಶ್ವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ.ಎಚ್.ಎಸ್.
ರಾಘವೇಂದ್ರಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ ಇತರರಿದ್ದರು.
ಪರೀಕ್ಷಾ ಕೇಂದ್ರಗಳು
ನಗರದ ಶಿವಲಿಂಗೇಶ್ವ ಮಹಿಳಾ ಕಾಲೇಜು, ರಾಚೋಟೇಶ್ವರ ಪದವಿ ಪೂರ್ವ ಕಾಲೇಜು, ಆದರ್ಶ ಐಟಿಐ ಕಾಲೇಜು, ಸೆಂಟ್ ಆನ್ಸ್ ಪ್ರೌಢಶಾಲೆ, ಹೊಸಮಠದ ಎಸ್‌ಜಿಎಂ ಪದವಿ ಪೂರ್ವ ಕಾಲೇಜು, ಹೊಸಮಠದ ಎಸ್‌ಎಂಎಸ್ ಪ್ರೌಢಶಾಲೆ, ಲಯನ್ಸ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.
ಪರೀಕ್ಷಾರ್ಥಿಗಳು ಯಾವುದೇ ತರಹದ ಮೊಬೈಲ್, ಬ್ಲೂಟೂತ್, ವಾಚ್ ಸೇರಿದಂತೆ ಇತರೆ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ. ಕೋವಿಡ್ ರೋಗ ಲಕ್ಷಣವಿರುವ ಅಭ್ಯರ್ಥಿಗಳಿಗೆ ಪಲ್ಸ್ ಆಕ್ಸಿಮೀಟರ್‌ನಿಂದ ಆಕ್ಸಿಜನ್ ಲೆವೆಲ್ ಪರೀಕ್ಷಿಸಬೇಕು.
ಸಂಜಯ ಶೆಟ್ಟೆಣ್ಣವರ,
ಜಿಲ್ಲಾಧಿಕಾರಿ, ಹಾವೇರಿ