Advertisement

ಶ್ರೀರಾಮಸೇನೆಯಿಂದ ಹಿಂದೂ ವಕೀಲರ ಸಮಾವೇಶ ಆಯೋಜನೆ

06:10 AM Aug 10, 2018 | Team Udayavani |

ಬೆಂಗಳೂರು: ಶ್ರೀರಾಮಸೇನೆ ವತಿಯಿಂದ ಆ.12ರಂದು ಹಿಂದೂ ವಕೀಲರ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ , ಇತ್ತೀಚಿನ ದಿನಗಳಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಲ್ಲೆ, ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾನೂನು ಸಲಹಾ ಸಮಿತಿ ರಚಿಸಲು ಸಮಾವೇಶದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಈ ಸಮಾವೇಶದಲ್ಲಿ ರಾಜ್ಯದ ಎಲ್ಲ ಭಾಗಗಳಿಂದ ಆಯ್ದ 500ಕ್ಕೂ ಅಧಿಕ ವಕೀಲರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

Advertisement

ಅಯ್ಯೋಧೆಯಲ್ಲಿ ರಾಮ ಮಂದಿರ ನಿರ್ಮಾಣ ಹಾಗೂ ಅಸ್ಸಾಂ ಮತ್ತು ಇತರೆ ರಾಜ್ಯಗಳಲ್ಲಿ ನೆಲೆಸಿರುವ ಬಾಂಗ್ಲಾ ವಲಸಿಗರನ್ನು ದೇಶದಿಂದ ಹೊರಹಾಕುವ ಕುರಿತು ಸಮಾವೇಶದಲ್ಲಿ ಚರ್ಚಿಸಲಾಗುವುದು. ಈ ಬಗ್ಗೆ ಯಾವ ರೀತಿಯ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬಹುದೆಂದು ವಕೀಲರು ಚಿಂತನೆ ನಡೆಸಲಿದ್ದಾರೆ ಎಂದು ಹೇಳಿದರು.

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ವಿನಾಕಾರಣ ನಮ್ಮ ಮೇಲೆ ಆರೋಪ ಹೊರಿಸಲಾಗುತ್ತಿದೆ. ರಾಜ್ಯ ಸರ್ಕಾರ ಅಧಿಕೃತವಾಗಿ ಇದುವರೆಗೂ ಯಾವುದೇ ಸಂಘಟನೆಯ ಹೆಸರನ್ನು ಉಲ್ಲೇಖ ಮಾಡದಿದ್ದರೂ, ನಮ್ಮ ಮೇಲೆ ಆರೋಪ ಹೊರಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗಾಂಧಿ ಬಜಾರ್‌ನ ವಿನೋದ ಪೈ ಹಾಲ್‌ನಲ್ಲಿ ನಡೆಯುವ ಸಮಾವೇಶದಲ್ಲಿ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜ, ಮಾನವ ಹಕ್ಕು ಆಯೋಗದ ಸದಸ್ಯ ಸಿ.ಜಿ.ಹುನಗುಂದ, ಜಿಲ್ಲಾ ನಿವೃತ್ತ ನ್ಯಾಯಾಧೀಶ ಕೊಟ್ರಯ್ಯಎಂ ಹಿರೇಮಠ, ಅನುಪಮ ಶೆಣೈ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next