ಮುಂಬಯಿ: ಜೂನ್ 9ರಂದು ಕುರ್ಲಾ ಪೂರ್ವದ ಬಂಟರ ಭವನದ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಜರಗಲಿರುವ ಬಂಟರ ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ 15ನೇ ಮೆಗಾ ಆರ್ಥಿಕ ಸಹಾಯ ಮೇಳ ಉದ್ಘಾಟನಾ ಸಮಾರಂಭದ ಪೂರ್ವಭಾವಿ ತಯಾರಿಯ ಬಗ್ಗೆ ಸಮಾಲೋಚನಾ ಸಭೆಯು ಜೂ. 6ರಂದು ಸಂಜೆ ಸಂಘದ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಅವರ ಅಧ್ಯಕ್ಷತೆಯಲ್ಲಿ ಜರಗಿತು.
ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್ ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಅವರು ಕಾರ್ಯಕ್ರಮ ಯಶಸ್ವಿಯಾಗಲು ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದರಲ್ಲದೆ ಈ ಬಾರಿ ಸುಮಾರು 1.66 ಕೋಟಿ ರೂ. ಮೊತ್ತವನ್ನು ಆರ್ಥಿಕವಾಗಿ ತೊಂದರೆಯಲ್ಲಿರುವ ಬಂಟ ವಿದ್ಯಾರ್ಥಿಗಳಿಗೆ, ವಿಧವೆಯರಿಗೆ ಹಾಗೂ ವಿಕಲಚೇತನರಿಗೆ ವಿತರಿಸಲಾಗುವುದು ಜೊತೆಗೆ ಸುಮಾರು 100 ವಿದ್ಯಾರ್ಥಿಗಳನ್ನು ದಾನಿಗಳ ಸಹಕಾರದೊಂದಿಗೆ ದತ್ತು ಪಡೆಯಲಾಗುವುದೆಂದು ನುಡಿದರು.
ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯದರ್ಶಿ ಖಾಂದೇಶ್ ಭಾಸ್ಕರ್ ಶೆಟ್ಟಿ ವಂದಿಸಿದರು. ಸಭೆಯಲ್ಲಿ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಜೊತೆ ಕೋಶಾಧಿಕಾರಿ ಗುಣಪಾಲ್ ಶೆಟ್ಟಿ ಐಕಳ, ಯುವ ವಿಭಾಗದ ಕಾರ್ಯಾಧ್ಯಕ್ಷ ಶರತ್ ವಿ. ಶೆಟ್ಟಿ, ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಉಪ ಕಾರ್ಯಾಧ್ಯಕ್ಷ ಸುಬ್ಬಯ್ಯ ಶೆಟ್ಟಿ, ಕೋಶಾಧಿಕಾರಿ ಸುರೇಶ್ ಶೆಟ್ಟಿ ಮರಾಠ, ಅಶೋಕ್ ಪಕ್ಕಳ, ಇಂದ್ರಾಳಿ ದಿವಾಕರ ಶೆಟ್ಟಿ, ರಾಜೀವ್ ಭಂಡಾರಿ, ಪ್ರಕಾಶ್ ಶೆಟ್ಟಿ ನಲ್ಯಗುತ್ತು, ಜಗದೀಶ್ ಶೆಟ್ಟಿ ನಂದಿಕೂರು, ಭಾಸ್ಕರ ಶೆಟ್ಟಿ, ಶಿವಪ್ರಸಾದ್ ಶೆಟ್ಟಿ, ಡಾ| ಆರ್. ಕೆ. ಶೆಟ್ಟಿ, ಕರುಣಾಕರ ಶೆಟ್ಟಿ ಕಲ್ಲಡ್ಕ, ಜಯಂತ್ ಪಕ್ಕಳ, ಪ್ರಭಾಕರ ಶೆಟ್ಟಿ ಬೋಳ, ದಿವಾಕರ ಶೆಟ್ಟಿ ಕುರ್ಲಾ, ಪ್ರಭಾಕರ ಬಿ. ಶೆಟ್ಟಿ, ಕರ್ನೂರು ಮೋಹನ್ ರೈ, ಪ್ರೇಮನಾಥ ಮುಂಡ್ಕೂರು, ಕಿಶೋರ್ ಕುಮಾರ್ ಕುತ್ಯಾರ್, ಭಾಸ್ಕರ ಶೆಟ್ಟಿ ಕಾರ್ನಾಡು, ರಘುನಾಥ ಎನ್. ಶೆಟ್ಟಿ, ಸಿಎ ವಿಶ್ವನಾಥ ಶೆಟ್ಟಿ, ಪ್ರವೀಣ್ ಶೆಟ್ಟಿ ವರಂಗ, ಸುಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಚಿತ್ರ-ವರದಿ: ಪ್ರೇಮನಾಥ ಮುಂಡ್ಕೂರು