Advertisement
ಪಾಪನಾಶ ಕೆರೆ ಅಭಿವೃದ್ಧಿ ವಿಷಯದಲ್ಲಿ ವಿವಾದಗಳು ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಕ್ರೀಡಾ ಸಚಿವ ರಹೀಂಖಾನ್, ಜಿಲ್ಲಾಧಿಕಾರಿ ಡಾ| ಎಚ್.ಆರ್. ಮಹಾದೇವ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಜತೆಗೆ ಕೆರೆಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ ಬರ ಎದುರಾಗಿದೆ. ಕೆರೆಯಲ್ಲಿನ ನೀರು ಖಾಲಿ ಮಾಡುವುದು ಬೇಡ ಎಂದು ಅನೇಕರು ಒತ್ತಾಯಿಸಿದ್ದಾರೆ. ಆದರೆ, ಕೆಲವರು ಕೆರೆಯಲ್ಲಿನ ನೀರು ಅಶುದ್ಧವಾಗಿದೆ ಎಂದು ಹೇಳಿರುವ ಹಿನ್ನೆಲೆಯಲ್ಲಿ ಖುದ್ದು ಭೇಟಿ ನೀಡಿ ಪರಿಶೀಲಿಸಿದ್ದಾಗಿದ್ದು, ಸದ್ಯ ಕೆರೆಯಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣ, ಯಾವ ಕಾರಣಕ್ಕೆ ಚಂರಡಿ ನೀರು ಕೆರೆಗೆ ಬರುತ್ತಿದೆ. ಕೆರೆಯಲ್ಲಿನ ನೀರು ಶುದ್ಧೀಕರಣ ಮಾಡುವ ಕುರಿತು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲದೆ, ಕೆರೆಯಲ್ಲಿನ ನೀರಿನ ಗುಣಮಟ್ಟದ ಪರೀಕ್ಷೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ. ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
Related Articles
Advertisement
ಈ ಮಧ್ಯದಲ್ಲಿ ಶಿವಶರಣಪ್ಪ ವಾಲಿ ಮಾತನಾಡಿ, ವಿವಿಧ ಬಡಾವಣೆಗಳ ಕೊಳಚೆ ನೀರು ನೇರವಾಗಿ ಕೆರೆಗೆ ಬರುತ್ತಿದೆ. ಪುಣ್ಯ ಕರುಣಿಸಬೇಕಿರುವ ಕೆರೆ ಈಗ ಶಾಪ ನೀಡುವಂತಾಗಿದೆ ಎಂದು ಅಧಿಕಾರಿಗಳ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಬಂಡೆಪ್ಪ ಖಾಶೆಂಪುರ, ಯಾವ ಕಾರಣಕ್ಕೆ ಚರಂಡಿ ನೀರು ಕೆರೆಗೆ ಬರುತ್ತಿದೆ. ಕೆರೆಯಲ್ಲಿನ ನೀರಿನ ಗುಣಮಟ್ಟ ಹೇಗಿದೆ. ನೀರಿನ ಪ್ರಮಾಣ ಎಷ್ಟೀದೆ ಎಂದು ಮುಂದಿನ 8 ದಿನಗಳಲ್ಲಿ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಸೂಚಿಸಿದರು.
ಚರಂಡಿ ನೀರು ಸ್ಥಳಾಂತರಿಸಿ ಕೆರೆಯಲ್ಲಿನ ನೀರಿನ ತಪಾಸಣೆ ನಡೆಸಿ ಅದರ ಆಧಾರದಲ್ಲಿ ತೀರ್ಮಾನ ತೆಗೆದುಕೊಂಡು ಕೆರೆ ಅಭಿವೃದ್ಧಿಗೆ ಮುಂದಾಗಬೇಕು ಎಂದು ಜನರು ಆಗ್ರಹಿಸಿದರು. ಈಗಾಗಲೇ ಜಿಲ್ಲಾಡಳಿತ ತಯಾರಿಸಿದ ಕ್ರಿಯಾ ಯೋಜನೆ ಪ್ರಕಾರ ಇಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದರೆ ಪಾಪನಾಶ ಉತ್ತಮ ಪ್ರವಾಸಿ ತಾಣವಾಗಿ ಬೆಳೆಯುತ್ತದೆ. ಆದರೆ, ಬೇರೆ ಜಿಲ್ಲೆಯವರು ಬೀದರ ಅಭಿವೃದ್ಧಿಗೆ ಮಾರಕವಾಗಿದ್ದಾರೆ. ಅಭಿವೃದ್ಧಿ ಕಾರ್ಯಗಳಿಗೆ ಅಡಚಣೆ ಉಂಟು ಮಾಡುತ್ತಿದ್ದಾರೆ ಎಂಬ ಮಾತುಗಳು ಕೂಡ ಅಲ್ಲಿ ಕೇಳಿ ಬಂದವು.