Advertisement

ಧರ್ಮ ಸಂಘರ್ಷ ಶೀಘ್ರ ಇನ್ನಷ್ಟು ಉಲ್ಬಣ, ರಾಜಕೀಯ ಪಕ್ಷಗಳು ಇಬ್ಭಾಗ: ಕೋಡಿಮಠ ಶ್ರೀ

09:59 PM Aug 17, 2022 | Team Udayavani |

ಸೊರಬ: ಮತಾಂಧತೆಯಿಂದಾಗಿ ಧರ್ಮ ಸಂಘರ್ಷಗಳು ನಡೆಯುತ್ತಿದ್ದು, ನೈಜ ಜ್ಞಾನದ ಕೊರತೆಯೇ ಇದಕ್ಕೆ ಕಾರಣ. ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಉಲ್ಬಣಗೊಳ್ಳಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದ್ದಾರೆ.

Advertisement

ತಾಲೂಕಿನ ಜಡೆ ಸಂಸ್ಥಾನ ಮಠದ ಆವರಣದಲ್ಲಿ ಜೀರ್ಣೋದ್ಧಾರ ಆಗುತ್ತಿರುವ ಶ್ರೀ ಕುಮಾರ ಕಂಪಿನ ಸಿದ್ಧವೃಷಭೇಂದ್ರ ಕತೃ ಗದ್ದುಗೆಯ ಶಿಲಾಮಯ ಕಟ್ಟಡದ ಕಾಮಗಾರಿ ವೀಕ್ಷಿಸಿ, ಕತೃ ಗದ್ದುಗೆಯ ದರ್ಶನ ಪಡೆದು ಮಾತನಾಡಿದ ಅವರು, ದೇಶದಲ್ಲಿ ನಡೆಯುತ್ತಿರುವ ಧರ್ಮ ಸಂಘರ್ಷಗಳಿಗೆ ಜ್ಞಾನದ ಕೊರತೆ ಮುಖ್ಯ ಕಾರಣವಾಗಿದೆ. ಇದರಿಂದ ಅಶಾಂತಿಯ ವಾತಾವರಣ ನಿರ್ಮಾಣವಾಗುತ್ತಿದೆ ಎಂದರು.

ಶುಭಕೃತ ನಾಮಸಂವತ್ಸರವು ದೇಶದಲ್ಲಿ ಅಶುಭವನ್ನುಂಟು ಮಾಡಲಿದೆ. ಮಠದಲ್ಲಿ ಪಂಚಾಗ್ನಿ ಮಾಡುವ ಸಂದರ್ಭದಲ್ಲಿ ಅಗ್ನಿಕುಂಡ ಒಡೆದು ಗಾಯ ಮಾಡಿತು. ಪೂರ್ಣ ಪ್ರಮಾಣದಲ್ಲಿ ಪೂಜೆ ಸಲ್ಲಿಸಲು ಸಾಧ್ಯವಾಗಲಿಲ್ಲ. ಇದರಿಂದಾಗಿ ನಾಡಿನಲ್ಲಿ ಬೆಂಕಿ ಅನಾಹುತ ಸಂಭವಿಸುವ ಲಕ್ಷಣವಿದೆ ಎಂದೆನಿಸುತ್ತದೆ. ಕಾರ್ತಿಕ ಮಾಸದಲ್ಲಿ ಪ್ರಕೃತಿ ವಿಕೋಪಗಳು ಹೆಚ್ಚಾಗಲಿದ್ದು, ಮುಂದಿನ ದಿನಗಳಲ್ಲಿ ರಾಜಕೀಯ ಪಕ್ಷಗಳು ಇಬ್ಭಾಗವಾಗುವ ಸಂಭವವಿದೆ. ಹಿಂಗಾರು ಮಳೆ ಕಡಿಮೆಯಾಗಿ ಅಕಾಲಿಕ ಮಳೆಯಾಗಲಿದೆ. ರೋಗ ರುಜಿನಗಳು ಕಾಣಿಸಿಕೊಳ್ಳಲಿವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next