ದೇವನಹಳ್ಳಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ವಿದ್ಯಾರ್ಥಿ ಜೀವನದ ಅತ್ಯಂತ ಪ್ರಮುಖ ಘಟ್ಟವಾಗಿದೆ. ಇಂದಿನಿಂದ ಪರೀಕ್ಷೆ ಆರಂಭ ವಾಗಲಿದ್ದು, ವಿದ್ಯಾರ್ಥಿಗಳು ಆತ್ಮವಿಶ್ವಾಸ ದಿಂದ ಪರೀಕ್ಷೆ ಎದುರಿಸಬೇಕು ಎಂದು ಶಾಸಕ ಎಲ್.ಎನ್.ನಾರಾಯಣಸ್ವಾಮಿ ತಿಳಿಸಿದರು. ನಗರದ ತಾಪಂನಲ್ಲಿರುವ ಶಾಸಕರ ಕಚೇರಿಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಿದ್ಧತೆ ಬಗ್ಗೆ ಸಂಬಂಧಿಸಿದಂತೆ ಅಧಿಕಾರಿಗಳು ಸಭೆಯಲ್ಲಿ ಮಾತನಾಡಿದರು.
ತಾಲೂಕಿನಲ್ಲಿ 12 ಪರೀಕ್ಷೆ ಕೇಂದ್ರಗಳಿದ್ದು, ಅದರಲ್ಲಿ 3,380 ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಗಳು ಪರೀಕ್ಷೆ ಬರೆ ಯುತ್ತಿದ್ದಾರೆ. ಪ್ರತಿ ವಿದ್ಯಾ ರ್ಥಿಗೆ 3 ಮಾಸ್ಕ್ ನೀಡಲಾಗಿದೆ. ವಿಜಯಪುರದಲ್ಲಿ 3 ಪಾಸಿಟಿವ್ ಪ್ರಕರಣಗಳು ಬಂದಿವೆ. ಹೀಗಾಗಿ ಸೀಲ್‌ಡೌನ್ ಆಗಿರುವ ಕಡೆ ವಿದ್ಯಾರ್ಥಿಗಳು 30 ಜನರಿದ್ದು, ಅವರಿಗೆ ಪ್ರತ್ಯೇಕ ಕೊಠಡಿ ಕಾಯ್ದಿರಿಸ ಲಾಗಿದೆ. 2 ವಿದ್ಯಾರ್ಥಿಗಳು ಕ್ವಾರೆಂಟೈನ್‌ನಲ್ಲಿರುವುದ ರಿಂದ ಸೆಪ್ಟೆಂಬರ್‌ನಲ್ಲಿ ಪರೀಕ್ಷೆ ಬರೆಯಲು ಮೊದಲ ಆದ್ಯತೆ ನೀಡಲಾಗುವುದು. 350 ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯಕ್ಕೆ ನಿರ್ವಹಿಸಲು ನಿಯೋಜಿಸಲಾಗಿದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಖಾಸಗಿ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
ಪೋಷಕರು ಆತಂಕಕ್ಕೆ ಒಳಗಾಗಬಾರದು. ವಿದ್ಯಾರ್ಥಿಗಳು ಧೈರ್ಯವಾಗಿ ಪರೀಕ್ಷೆ ದುರಿಸಬೇಕು. ಕಳೆದ ಪರೀಕ್ಷೆ ವೇಳೆ ತಾಲೂಕು ಮೊದಲ ಸ್ಥಾನ ದಲ್ಲಿತ್ತು. ರಾಜ್ಯದಲ್ಲಿ ಗುಣಮಟ್ಟದ ಫಲಿತಾಂಶದಲ್ಲಿ ತಾಲೂಕು 3 ಸ್ಥಾನ ದಲ್ಲಿತ್ತು. ರಾಜ್ಯದಲ್ಲಿ ಮೊದಲ ಸ್ಥಾನಕ್ಕೆ ತರಲು ಶ್ರಮಿಸಬೇಕು ಎಂದರು. ಬಿಇಒ ಅಶ್ವತ್ಥನಾರಾಯಣ್, ತಾಲೂಕು ಜೆಡಿಎಸ್ ಅಧ್ಯಕ್ಷ ಬಿ.ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಜಿ.ಎ. ರವೀಂದ್ರ, ಹಾಪ್‌ಕಾಮ್ಸ್ ನಿರ್ದೇ ಶಕ ಶ್ರೀನಿವಾಸ್, ಕಸಬ ಹೋಬಳಿ ಜೆಡಿಎಸ್ ಅಧ್ಯಕ್ಷ ಚಿಕ್ಕ ನಾರಾಯಣ ಸ್ವಾಮಿ, ಸಂಪಂಗಪ್ಪ, ಇದ್ದರು.
ಪರೀಕ್ಷೆ ಯಶಸ್ವಿಗೆ ಶ್ರಮಿಸಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಜಿಲ್ಲಾಡಳಿತ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಈಗಾಗಲೇ ಎಲ್ಲ ವಿದ್ಯಾರ್ಥಿ ಗಳಿಗೆ ಸೌಲಭ್ಯಗಳ ಜೊತೆಗೆ ಅನುಸರಿಸಬೇಕಾದ ಮಾರ್ಗ ಸೂಚಿ ಬಗ್ಗೆ ಮಾರ್ಗದರ್ಶನ ನೀಡಲಾಗಿದೆ ಎಂದು ಸಾರ್ವ ಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕ ಗಂಗಮಾರೇಗೌಡ ತಿಳಿಸಿದರು. ನಗರದ ಸೂಲಿಬೆಲೆ ರಸ್ತೆಯಲ್ಲಿರುವ ಸರ್ಕಾರಿ ಮಾದರಿ ಹೆಣ್ಣು ಮಕ್ಕಳ ಪ್ರೌಢಶಾಲೆ ಪರೀಕ್ಷೆ ಕೇಂದ್ರದಲ್ಲಿ ಅಧಿಕಾರಿಗಳೊಂದಿಗೆ ಸಭೆ ಹಾಗೂ ಪರೀಕ್ಷೆ ಸಿದ್ಧತೆ ಪರಿಶೀಲಿಸಿ ಮಾತನಾಡಿದರು.
ಕೋವಿಡ್-19 ಆತಂಕದ ಮಧ್ಯೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಯಶಸ್ವಿಗೊಳಿಸಲು ಪರೀಕ್ಷೆ ಕೊಠಡಿ ಮೇಲ್ವಿಚಾರಕರು ಶ್ರಮಿಸಬೇಕು. ಪ್ರತಿ ವಿಧ್ಯಾರ್ಥಿಗಳು ಪರೀಕ್ಷೆ ಕೇಂದ್ರಕ್ಕೆ ಬಂದ ಕೂಡಲೇ ಸ್ಯಾನಿ ಟೈಸರ್‌ನಿಂದ ಕೈ ಸ್ವತ್ಛಗೊಳಿಸು ವಂತೆ ಹಾಗೂ ಆರೋಗ್ಯ ಪರಿಶೀಲಿ ಸಲು ಥರ್ಮಾ ಮೀಟರ್‌ನಿಂದ ತಾಪಮಾನ ಪರೀಕ್ಷಿಸಬೇಕು. ಸಹಪಾಠಿಯೊಂದಿಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಆತಂಕವಿಲ್ಲದೆ ಪರೀಕ್ಷೆ ಎದುರಿ ಸುವ ಅವಕಾಶ ಶಿಕ್ಷಣ ಇಲಾಖೆ ಕಲ್ಪಿಸಿದೆ. ಪ್ರತಿಯೊಬ್ಬ ವಿದ್ಯಾರ್ಥಿ ಪರೀಕ್ಷೆಗೆ ಹಾಜ ರಾಗಿ ಭವಿಷ್ಯ ಉಜ್ವಲಗೊಳಿಸಿಕೊಳ್ಳಬೇಕು ಎಂದರು. ಬಿಇಒ ಅಶ್ವತ್ಥನಾರಾಯಣ್ ಮತ್ತಿತರರು ಇದ್ದರು.