Advertisement
ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ರಾಜ್ಯ ಅಧ್ಯಕ್ಷ ಎಸ್.ಎಸ್. ಪ್ರಕಾಶಂ ಮತ್ತು ಜಿಲ್ಲಾ ಅಧ್ಯಕ್ಷ ಅಲ್ಲಾವಲಿ ಗಾಜಿಖಾನ್ ಇಬ್ಬರು ಜಂಟಿ ಸುದ್ದಿಗೋಷ್ಠಿಗೆ ಆಗಮಿಸಿದ್ದರು. ಪ್ರಕಾಶಂ ದಾವಣಗೆರೆ ಕಾಂಗ್ರೆಸ್ ಕಾರ್ಮಿಕ ವಿಭಾಗದ ನೂತನ ಜಿಲ್ಲಾ ಅಧ್ಯಕ್ಷರನ್ನಾಗಿ ಕೆ.ಸಿ.ಲಿಂಗರಾಜ್‌ರನ್ನು ನೇಮಕ ಮಾಡಿರುವ ವಿಷಯ ಪ್ರಸ್ತಾಪಿಸುತ್ತಿದ್ದಂತೆಯೇ ಅಲ್ಲಾವಲಿ ಗಾಜಿಖಾನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. “ನಾನು ಜಿಲ್ಲಾಧ್ಯಕ್ಷ ಇಲ್ಲೇ ಇದ್ದೇನೆ. ನೀವು ಮತ್ತೂಬ್ಬರನ್ನು ಆಯ್ಕೆ ಮಾಡಿರುವ ಬಗ್ಗೆ ಹೇಳುತ್ತಿದ್ದೀರಲ್ಲ. ಇದು ಸರಿಯಲ್ಲ. ಒಪ್ಪುವುದಿಲ್ಲ ಎಂದು ಹೇಳಿದರು.
ಒಂದು ಮಾತು ತಿಳಿಸದೆ ಏಕಾಏಕಿ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ತೆಗೆದು ಹಾಕಲಾಗಿದೆ ಎಂದು ಗಾಜಿಖಾನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.