Advertisement

ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ

10:40 AM Jan 21, 2019 | |

ಹೊಳಲ್ಕೆರೆ: ವಿದ್ಯಾರ್ಥಿಗಳು ಮುಂಬರುವ ಪರೀಕ್ಷೆಗಳನ್ನು ಅತ್ಮವಿಶ್ವಾಸದಿಂದ ಎದುರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಾಹಿತಿ ಹುರುಳಿ ಬಸವರಾಜ್‌ ಹೇಳಿದರು.

Advertisement

ಪಟ್ಟಣದ ಸರಕಾರಿ ಎಂಎಂ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಪೋಷಕರ ಸಭೆ ಹಾಗೂ ಪರೀಕ್ಷಾ ಪೂರ್ವಸಿದ್ಧತಾ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ನಿತ್ಯ ಬದುಕಿನ ವೇಳಾಪಟ್ಟಿ ಸಿದ್ಧಪಡಿಸಿಕೊಳ್ಳಬೇಕು. ಬೆಳಗ್ಗೆ ಏಳುವ ಸಮಯದಿಂದ ಹಿಡಿದು ರಾತ್ರಿ ಮಲಗುವ ತನಕ ವೇಳಪಟ್ಟಿಯಂತೆ ವಿದ್ಯಾಭ್ಯಾಸ ಮಾಡಬೇಕು ಎಂದರು.

ವಿದ್ಯಾರ್ಥಿಗಳು ಸಾಧನೆಗೆ ಬೆನ್ನು ತೋರಿಸದೆ ಸತತ ಪರಿಶ್ರಮ ಹಾಕುವ ಮೂಲಕ ಜೇಡರ ಬಲೆಯಂತೆ ಯಶಸ್ವಿಯಾಗಬೇಕು. ಕಾಯಕದ ರೂಪದಲ್ಲಿ ವಿದ್ಯಾಭ್ಯಾಸ ನಡೆಸಬೇಕು. ಪರೀಕ್ಷೆ ಸಮಯದಲ್ಲಿ ವಿಪರೀತ ಓದುವುದರ ಜತೆಗೆ ಶ್ರಾಂತಿ ಪಡೆದುಕೊಳ್ಳಬೇಕು ಎಂದು ಹೇಳಿದರು.

ವಿದ್ಯಾರ್ಥಿಗಳು ತಮ್ಮಲ್ಲಿರುವ ಕೀಳಿರಿಮೆ ಬಿಟ್ಟು ಎಲ್ಲ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕು. ಬಡತನ ಶಿಕ್ಷಣಕ್ಕೂ ಸಂಬಂಧವಿಲ್ಲ. ಸತತ ಪ್ರಯತ್ನ ಮಾಡುವ ಮೂಲಕ ಸಾಧನೆಗೆ ಮುಂದಾಗಬೇಕು. ವಿದ್ಯಾರ್ಥಿಗಳು ಗೊತ್ತಿಲ್ಲದ ವಿಷಯವನ್ನು ಶಿಕ್ಷಕರಿಂದ ಕೇಳಿ ತಿಳಿದುಕೊಳ್ಳುವ ಶಕ್ತಿ ರೂಢಿಸಿಕೊಳ್ಳಬೇಕು ಎಂದರು.

Advertisement

ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಅನಂತ್‌ ಮಾತನಾಡಿ, ಜಿಲ್ಲೆಯಲ್ಲಿರುವ ಶೈಕ್ಷಣಿಕ ಅಭಿವೃದ್ಧಿಗೆ ಸರಕಾರ ಸಾಕಷ್ಟು ಸೌಲಭ್ಯ ಕಲ್ಪಿಸಿಕೊಟ್ಟಿದೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳೂ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮವಾದ ಫಲಿತಾಂಶ ತರಲು ಶ್ರಮಿಸಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕಿ ನಿರ್ಮಾಲಾ ದೇವಿ ಮಾತನಾಡಿ, ಜಿಲ್ಲೆಯಲ್ಲಿರುವ ಅಂಗ್ಲ ಮಾಧ್ಯಮ ಸರಕಾರಿ ಶಾಲೆಗಳಲ್ಲಿ ಅತಿ ಹೆಚ್ಚು ಫಲಿತಾಂಶ ಪಡೆದುಕೊಳ್ಳುವ ಕೀರ್ತಿ ಪಡೆದುಕೊಂಡಿದೆ. ಸಾಕಷ್ಟು ಮೂಲ ಸಮಸ್ಯೆಗಳ ನಡುವೆ ಉತ್ತಮ ಶಿಕ್ಷಣ ನೀಡಲು ಶಾಲೆಯ ಎಲ್ಲ ಶಿಕ್ಷಕರು ಶಕ್ತಿ ಮೀರಿ ಶ್ರಮಿಸುತ್ತಿದ್ದಾರೆ ಎಂದರು.

ಶಾಲಾ ಸಮಿತಿ ಅಧ್ಯಕ್ಷ ಸೈಯ್ಯದ್‌ ಖಾನ್‌, ಸದಸ್ಯರಾದ ರಮೇಶ್‌, ಮಂಜುನಾಥ, ರುದ್ರೇಶ್‌, ಬಸಪ್ಪ, ರೆಡ್‌ಕ್ರಾಸ್‌ ಮಾಜಿ ಕಾರ್ಯದರ್ಶಿ ಗಿರೀಶ್‌, ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಬಿ. ಶಿವರುದ್ರಪ್ಪ, ಎಸ್‌. ವೇದಮೂರ್ತಿ, ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next