Advertisement
ಲೋಕಸಭೆ ಚುನಾವಣೆ ಫಲಿತಾಂಶದಿಂದ ನೈತಿಕ ಹೊಣೆ ಹೊತ್ತು ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅದೇ ರೀತಿ ರಾಜ್ಯದಲ್ಲಿ ಉಪ ಚುನಾವಣೆಯಲ್ಲಿ ಪಕ್ಷ ಹೀನಾಯವಾಗಿ ಸೋತಿದ್ದರಿಂದ ಸಿದ್ದರಾಮಯ್ಯ ಪ್ರತಿ ಪಕ್ಷದ ನಾಯಕನ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
Related Articles
Advertisement
ಖರ್ಗೆ ನೇಮಕದ ಗೊಂದಲ: ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ರಾಷ್ಟ್ರ ಅಥವಾ ರಾಜ್ಯ ರಾಜಕಾರಣದಲ್ಲಿ ಯಾವ ಸ್ಥಾನ ನೀಡ ಬೇಕೆನ್ನುವ ಗೊಂದಲವೂ ಪಕ್ಷದ ನಾಯಕರಲ್ಲಿ ಉಂಟಾ ಗಿದೆ ಎನ್ನಲಾಗುತ್ತಿದೆ. ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಒಪ್ಪದಿದ್ದರೆ, ಖರ್ಗೆಯವರನ್ನು ಅಧ್ಯಕ್ಷರನ್ನಾಗಿ ನೇಮಿಸಲು ಹೈಕಮಾಂಡ್‌ನ ಹಿರಿಯ ನಾಯಕರ ಒಂದು ಬಣ ಪ್ರಯತ್ನಿಸುತ್ತಿದೆ ಎಂದು ಹೇಳಲಾಗುತ್ತಿದೆ.
ಇನ್ನೊಂದೆಡೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಿದರೆ, ಖರ್ಗೆಯವರನ್ನು ರಾಜ್ಯದಲ್ಲಿ ಪಕ್ಷದ ಸಮನ್ವಯ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸುವಂತೆ ಒಂದು ಬಣದ ನಾಯಕರು ಹೈ ಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗುತ್ತಿದೆ. ಆ ಮೂಲಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡು ವಿನ ಭಿನ್ನಾಭಿಪ್ರಾಯವನ್ನು ನಿಯಂತ್ರಿಸಿ ಪಕ್ಷವನ್ನು ಸರಿದಾರಿಗೆ ತರಲು ಲೆಕ್ಕಾಚಾರ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.
ಒಂದು ವೇಳೆ, ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯ ಸಮನ್ವಯ ಸಮಿತಿ ಅಧ್ಯಕ್ಷರಾದರೆ, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರನ್ನು ಸಿಡಬ್ಲೂಸಿ ಸದಸ್ಯ ರನ್ನಾಗಿ ಮಾಡಬಹುದು ಎನ್ನುವುದು ಸಿದ್ದರಾಮಯ್ಯ ವಿರೋಧಿ ಬಣದ ನಾಯಕರ ಲೆಕ್ಕಾಚಾರ ಎನ್ನಲಾಗು ತ್ತಿದೆ. ಆದರೆ, ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿಸಲು, ಸಿದ್ದರಾಮಯ್ಯ ಅವರನ್ನು ಸಮ ನ್ವಯ ಸಮಿತಿ ಅಧ್ಯಕ್ಷರ ನೇಮಕಕ್ಕೂ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಮೂಲಕ ಡಿ.ಕೆ.ಶಿವಕುಮಾರ್ ಅಧ್ಯಕ್ಷರಾಗದಂತೆ ತಡೆ ಯಲು ಎಲ್ಲ ರೀತಿಯ ಪ್ರಯತ್ನ ಮುಂದುವರೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಅದೇ ಕಾರಣಕ್ಕೆ ಎಐಸಿಸಿ ಅಧ್ಯಕ್ಷರ ನೇಮಕ ಗೊಂದಲ ಮುಗಿಯುವವರೆಗೂ ಕೆಪಿಸಿಸಿ ಅಧ್ಯಕ್ಷರ ನೇಮಕವಾಗುವುದು ಅನುಮಾನ ಎಂದು ಮೂಲಗಳು ತಿಳಿಸಿವೆ.