Advertisement
ಬಿಜೆಪಿ ರಾಹುಲ್ ಅವರನ್ನು ಅನರ್ಹಗೊಳಿಸಲು ಎಲ್ಲಾ ರೀತಿಯಲ್ಲಿ ಪ್ರಯತ್ನಿಸಿದರು. ಸತ್ಯ ಹೇಳುವವರನ್ನು ಇಟ್ಟುಕೊಳ್ಳಲು ಅವರು ಬಯಸುವುದಿಲ್ಲ ಆದರೆ ನಾವು ಸತ್ಯವನ್ನೇ ಮಾತನಾಡುತ್ತೇವೆ. ಜೆಪಿಸಿಗೆ ಬೇಡಿಕೆ ಇಡುತ್ತೇವೆ, ಬೇಕಾದರೆ ಪ್ರಜಾಪ್ರಭುತ್ವ ಉಳಿಸಲು ಜೈಲಿಗೆ ಹೋಗುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
Related Articles
Advertisement
ರಾಹುಲ್ ಗಾಂಧಿ ವಿರುದ್ಧದ ಕ್ರಮವನ್ನು ಸರ್ಕಾರ ಹಿಂಪಡೆಯಬೇಕು ಎಂದು ಮಿತ್ರ ಪಕ್ಷ ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಹೇಳಿದ್ದಾರೆ.
ಅದಾನಿ, ಪ್ರಧಾನಿ ವಿರುದ್ಧ ರಾಹುಲ್ ಗಾಂಧಿ ಪ್ರಶ್ನೆ ಎತ್ತಿದ್ದ ದಿನವೇ ರಾಹುಲ್ ಗಾಂಧಿ ಅವರ ಬಾಯಿ ಮುಚ್ಚಿಸಲು ಈ ರೀತಿಯ ಷಡ್ಯಂತ್ರ ಆರಂಭಿಸಲಾಗಿತ್ತು. ಇದು ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ, ಸರ್ವಾಧಿಕಾರದ ಧೋರಣೆಯ ಸ್ಪಷ್ಟ ನಿದರ್ಶನ ಎಂದು ಕಾಂಗ್ರೆಸ್ ನಾಯಕ, ಸಂಸದ ಕೆಸಿ ವೇಣುಗೋಪಾಲ್ ಪ್ರತಿಕ್ರಿಯಿಸಿದ್ದಾರೆ.
ನಮ್ಮ ದೇಶದಲ್ಲಿ ಕಳ್ಳ, ಕಳ್ಳ ಎಂದು ಕರೆಯುವುದು ಅಪರಾಧವಾಗಿಬಿಟ್ಟಿದೆ. ಕಳ್ಳರು ಮತ್ತು ಲೂಟಿಕೋರರು ಇನ್ನೂ ಮುಕ್ತರಾಗಿದ್ದಾರೆ ಮತ್ತು ರಾಹುಲ್ ಗಾಂಧಿಯವರಿಗೆ ಶಿಕ್ಷೆಯಾಗಿದೆ. ಇದು ಪ್ರಜಾಪ್ರಭುತ್ವದ ನೇರ ಕೊಲೆ. ಎಲ್ಲಾ ಸರಕಾರಿ ವ್ಯವಸ್ಥೆಗಳು ಒತ್ತಡದಲ್ಲಿವೆ. ಇದು ಸರ್ವಾಧಿಕಾರದ ಅಂತ್ಯದ ಆರಂಭ. ಹೋರಾಟಕ್ಕೆ ಮಾತ್ರ ನಿರ್ದೇಶನ ನೀಡಬೇಕು ಎಂದು ಮಹಾರಾಷ್ಟ್ರದ ಮಾಜಿ ಸಿಎಂ ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಪ್ರತಿಕ್ರಿಯೆ ನೀಡಿದ್ದಾರೆ.
ಇದು ನಿರಂಕುಶ ಸರಕಾರದ ಅತ್ಯಂತ ಕ್ರೂರ ಪ್ರದರ್ಶನ ಎಂದು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.