Advertisement

ಹಿಮಾಚಲ ಪ್ರದೇಶ ಚುನಾವಣೆ: ಪ್ರತಿ ಮನೆಗೆ 300 ಯೂನಿಟ್‌ ಉಚಿತ ವಿದ್ಯುತ್‌; ಕಾಂಗ್ರೆಸ್‌ ಭರವಸೆ

05:01 PM Aug 08, 2022 | Team Udayavani |

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 300 ಯೂನಿಟ್ ಉಚಿತ ವಿದ್ಯುತ್ ಮತ್ತು ಬಡ ಮಹಿಳೆಯರಿಗೆ 1,500 ರೂಪಾಯಿ ಆರ್ಥಿಕ ನೆರವು ನೀಡುವುದಾಗಿ ಕಾಂಗ್ರೆಸ್ ಸೋಮವಾರ ಭರವಸೆ ನೀಡಿದೆ.

Advertisement

ಹಿಮಾಚಲ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದ 10 ದಿನಗಳಲ್ಲಿ ಪಕ್ಷ ಆಡಳಿತವಿರುವ ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಮಾಡಿದಂತೆ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದಾಗಿ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಭರವಸೆ ನೀಡಿದರು.

ಮಾಧ್ಯಮದವರೊಂದಿಗೆ ನಡೆಸಿದ ಸಂವಾದದ ವೇಳೆ ಹಿರಿಯ ಕಾಂಗ್ರೆಸ್ ನಾಯಕರು ಈ ಘೋಷಣೆ ಮಾಡಿದ್ದಾರೆ.

ಹಣದ ಲಭ್ಯತೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಭರವಸೆಗಳನ್ನು ಈಡೇರಿಸಲು ರಾಜ್ಯ ಬಜೆಟ್‌ನಲ್ಲಿ ಸೂಕ್ತ ನಿಬಂಧನೆಗಳನ್ನು ಮಾಡಲಾಗುವುದು ಎಂದು ಬಘೇಲ್ ಹೇಳಿದರು.

ಇದನ್ನೂ ಓದಿ:ಕೊನೆಗೂ ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್

Advertisement

ಈ ಭರವಸೆಗಳನ್ನು ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಲಾಗುವುದು, ಅದನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಹಿಮಾಚಲ ಪ್ರದೇಶಕ್ಕೆ ಡಿಸೆಂಬರ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next