Advertisement

ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ಪ್ರತಿಭಟನೆ

10:27 AM May 17, 2018 | Team Udayavani |

ಬೆಂಗಳೂರು: ಬಿಎಸ್ ಯಡಿಯೂರಪ್ಪ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಗುರುವಾರ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದರೆ, ಮತ್ತೊಂದೆಡೆ ಬಿಎಸ್ ವೈ ಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಅನುಮತಿ ನೀಡಿದ ರಾಜ್ಯಪಾಲ ವಜೂಬಾಯಿ ವಾಲಾ ಅವರ ಕ್ರಮವನ್ನು ಖಂಡಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸುತ್ತಿದೆ.

Advertisement

ಮಾಜಿ ಸಿಎಂ ಸಿದ್ದರಾಮಯ್ಯ, ಕೆಸಿ ವೇಣುಗೋಪಾಲ್,ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಅಜಾದ್, ಪರಮೇಶ್ವರ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಧರಣಿ ನಡೆಸುತ್ತಿದ್ದಾರೆ.

ಸರ್ಕಾರ ರಚಿಸಲು ಬಿಜೆಪಿಗೆ ಆಹ್ವಾನ ಮತ್ತು ಬಿಎಸ್ ವೈ ಪ್ರಮಾಣವಚನ ಪ್ರಶ್ನಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್ ಜಂಟಿಯಾಗಿ ಸಲ್ಲಿಸಿದ್ದ ತುರ್ತು ಅರ್ಜಿ ಬಗ್ಗೆ ಮಧ್ಯರಾತ್ರಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ ನ್ಯಾ.ಅಶೋಕ್ ಭೂಷಣ್, ನ್ಯಾ.ಸಿಕ್ರಿ ಮತ್ತು ನ್ಯಾ.ಬೊಬ್ಡೆ ಅವರನ್ನೊಳಗೊಂಡ ವಿಶೇಷ ಪೀಠ ಯಡಿಯೂರಪ್ಪ ಪ್ರಮಾಣವಚನಕ್ಕೆ ಒಪ್ಪಿಗೆ ನೀಡಿದೆ. ಆದರೆ ಸರ್ಕಾರ ರಚನೆಯಾಗಲಿ ಅಥವಾ ಪ್ರಮಾಣವಚನವಾಗಲಿ ಸುಪ್ರೀಂಕೋರ್ಟ್ ಆದೇಶಕ್ಕೆ ಬದ್ಧವಾಗಿರಬೇಕು ಎಂದು ಸೂಚಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next