Advertisement
ಚಿತ್ರದೊಂದಿಗೆ ”ದೇಶವನ್ನು ದ್ವೇಷದ ಸಂಕೋಲೆಯಿಂದ ಮುಕ್ತಗೊಳಿಸಲು ಮತ್ತು ಬಿಜೆಪಿ-ಆರ್‌ಎಸ್‌ಎಸ್ ಮಾಡಿದ ಹಾನಿಯನ್ನು ಇಲ್ಲವಾಗಿಸಲು. ಹಂತ ಹಂತವಾಗಿ, ನಾವು ನಮ್ಮ ಗುರಿಯನ್ನು ತಲುಪುತ್ತೇವೆ. ” ಇನ್ನೂ 145 ದಿನಗಳು ಬಾಕಿಯಿದೆ, ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿತ್ತು.
Related Articles
Advertisement
ಭಾರತದ ಸಾಂವಿಧಾನಿಕ ವಿಷಯಗಳ ಯೋಜನೆಯಲ್ಲಿ ಹಿಂಸಾಚಾರಕ್ಕೆ ಅವಕಾಶವಿಲ್ಲ ಎಂದು ಹೇಳಿದ ಪಾತ್ರಾ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ, ಪಕ್ಷ “ಬೆಂಕಿ” ಯೊಂದಿಗೆ ಹಳೆಯ ಸಂಬಂಧವನ್ನು ಹೊಂದಿದೆ. ಪಕ್ಷ ಅಧಿಕಾರದಲ್ಲಿದ್ದಾಗ ಪಂಜಾಬ್‌ಗೆ ಬೆಂಕಿ ಹಚ್ಚಲಾಯಿತು ಮತ್ತು 1984 ರ ಗಲಭೆಯಲ್ಲಿ ಸಿಖ್ಖರನ್ನು ಜೀವಂತವಾಗಿ ಸುಡಲಾಯಿತು ಎಂದು ಹೇಳಿದ್ದಾರೆ.
ತೇಜಸ್ವಿ ಸೂರ್ಯ ತಿರುಗೇಟು
”ಟ್ವೀಟ್ ಮಾಡಿರುವ ಚಿತ್ರವು ಕಾಂಗ್ರೆಸ್ ರಾಜಕೀಯದ ಸಂಕೇತವಾಗಿದೆ. ದೇಶದಲ್ಲಿ ಬೆಂಕಿ ಹೊತ್ತಿಸುತ್ತಿದೆ.ಈ ಹಿಂದೆ ಅವರು ಹಚ್ಚಿದ ಬೆಂಕಿ ಭಾರತದ ಬಹುತೇಕ ಭಾಗಗಳಲ್ಲಿ ಅವರನ್ನು ಸುಟ್ಟುಹಾಕಿದೆ. ರಾಜಸ್ಥಾನ ಮತ್ತು ಛತ್ತೀಸ್ ಗಢದಲ್ಲಿ ಉಳಿದಿರುವ ಕೆಂಡ ಕೂಡ ಶೀಘ್ರದಲ್ಲೇ ಬೂದಿಯಾಗುತ್ತದೆ” ಎಂದು ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದಾರೆ.