Advertisement

Congress 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ: ಮಾಜಿ ಸಿಎಂ ಮೊಯ್ಲಿ ಭವಿಷ್ಯ

02:21 PM Apr 16, 2023 | Team Udayavani |

ನವದೆಹಲಿ : ಕರ್ನಾಟಕದಲ್ಲಿ ಬದಲಾವಣೆಯ ಗಾಳಿ’ ಬೀಸುತ್ತಿದೆ ಎಂದು ಪ್ರತಿಪಾದಿಸಿರುವ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಕನಿಷ್ಠ 130 ಸ್ಥಾನಗಳನ್ನು ಗೆಲ್ಲಲಿದೆ ಮತ್ತು ಬಿಜೆಪಿಯ ದಕ್ಷಿಣ ಭಾರತದ ಹೆಬ್ಬಾಗಿಲು ಸಂಪೂರ್ಣವಾಗಿ ಮುಚ್ಚಲಾಗುವುದು” ಎಂದು ಹೇಳಿದ್ದಾರೆ.

Advertisement

ಪಿಟಿಐಗೆ ನೀಡಿದ ಸಂದರ್ಶನದಲ್ಲಿ, ಕೇಂದ್ರದಲ್ಲಿ ಸರಕಾರ ರಚನೆಯಲ್ಲಿ ಕರ್ನಾಟಕ ಯಾವಾಗಲೂ ನಿರ್ಣಾಯಕ ಪಾತ್ರ ವಹಿಸುತ್ತದೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯ ಗೆಲುವು 2024 ರ ಕಾಂಗ್ರೆಸ್ ನೇತೃತ್ವದ ಸರಕಾರ ರಚನೆಗೆ ದಾರಿ ಮಾಡಿಕೊಡಲಿದೆ ಎಂದರು.

224 ಸದಸ್ಯ ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್ 130 ಕ್ಕಿಂತ ಕಡಿಮೆ ಸ್ಥಾನಗಳನ್ನು ಪಡೆಯುವುದಿಲ್ಲ ಮತ್ತು ಮೇ 10 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 60 ಸ್ಥಾನಗಳನ್ನು ದಾಟುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

ಜೆಡಿಎಸ್ ಬಿಜೆಪಿಯೊಂದಿಗೆ ಕೈಜೋಡಿಸುತ್ತಿದೆ ಎಂದು ಆರೋಪಿಸಿ, ಹೆಚ್‌ಡಿ ದೇವೇಗೌಡರ ನೇತೃತ್ವದ ಸಂಘಟನೆಯ “ಅವಕಾಶವಾದದ ರಾಜಕೀಯ” ವನ್ನು ಜನರು ತಿರಸ್ಕರಿಸುತ್ತಾರೆ ಎಂದರು.

”ಕಾಂಗ್ರೆಸ್ ಪರವಾಗಿ ಬದಲಾವಣೆಯ ಗಾಳಿ ಬೀಸುತ್ತಿದೆ. ಬಿಜೆಪಿ ಸಂಪೂರ್ಣ ಹದಗೆಟ್ಟಿದೆ. ಬಿಜೆಪಿಯಲ್ಲಿ ಯಾವುದೇ ಒಗ್ಗಟ್ಟು ಇಲ್ಲ ಮತ್ತು ಅವರಲ್ಲಿ ಹಲವರು ಟಿಕೆಟ್ ನಿರಾಕರಿಸಿದ ನಂತರ ಪಕ್ಷ ತೊರೆದು ಕಾಂಗ್ರೆಸ್ ಅಥವಾ ಇತರ ಪಕ್ಷಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next