Advertisement

Congo;ಭಾರತದ ಮೇಜರ್‌ ರಾಧಿಕಾಗೆ ವಿಶ್ವಸಂಸ್ಥೆಯ ಉನ್ನತ ಪ್ರಶಸ್ತಿ

12:08 AM May 29, 2024 | Team Udayavani |

ವಿಶ್ವಸಂಸ್ಥೆ: ಕಾಂಗೋದಲ್ಲಿ ವಿಶ್ವಸಂಸ್ಥೆ ಯೋಜನೆಯಲ್ಲಿ ಸೇವೆ ಸಲ್ಲಿಸಿದ ಭಾರತೀಯ ಮಹಿಳಾ ಶಾಂತಿಧೂತೆ ಮೇಜರ್‌ ರಾಧಿಕಾ ಸೇನ್‌ ವಿಶ್ವಸಂಸ್ಥೆಯ ಪ್ರತಿಷ್ಠಿತ ಮಿಲಿಟರಿ ಜೆಂಡರ್‌ ಅಡ್ವೋಕೇಟ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಧಾನ ಕಾರ್ಯದರ್ಶಿ ಆಂಟೊನಿಯೋ ಗುಟೆರಸ್‌ ಅವರನ್ನು ನೈಜ ನಾಯಕಿ ಎಂದು ಬಣ್ಣಿಸಿದ್ದಾರೆ. ಅಂತಾರಾಷ್ಟ್ರೀ ಯ ಶಾಂತಿಪಾಲನಾ ದಿನದ ಅಂಗವಾಗಿ ಮೇ 30ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next