Advertisement

ಗೌರಿಲಂಕೇಶ್‌ಗೆ ಕಾಂಗ್ರೆಸ್‌ ಶ್ರದ್ಧಾಂಜಲಿ

12:14 PM Sep 07, 2017 | Team Udayavani |

ಮೈಸೂರು: ಸೈದ್ಧಾಂತಿಕ ವಿಚಾರಗಳನ್ನು ಹೊಂದಿರುವವರ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರುವುದು ಶೋಚನೀಯವಾಗಿದ್ದು, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಅವರ ಹತ್ಯೆ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್‌ ವಿಷಾದಿಸಿದರು. ಮೈಸೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್‌ ಸಮಿತಿ ವತಿಯಿಂದ ಬುಧವಾರ ಆಯೋಜಿಸಿದ್ದ ಪತ್ರಕರ್ತೆ ಗೌರಿ ಲಂಕೇಶ್‌ರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.

Advertisement

ರಾಜ್ಯದಲ್ಲಿ 2 ವರ್ಷದ ಹಿಂದೆ ನಡೆದ ಡಾ.ಎಂ.ಎಂ.ಕಲಬುರ್ಗಿ ಅವರ ಹತ್ಯೆಗೆ ಕಾರಣವಾಗಿರುವ ಆರೋಪಿಗಳ ಬಂಧನವಾಗಿಲ್ಲ. ಇದರ ನಡುವೆಯೇ ಗೌರಿ ಲಂಕೇಶ್‌ ಅವರ ಹತ್ಯೆ ನಡೆದಿರುವುದು ಅತ್ಯಂತ ನೋವಿನ ಸಂಗತಿ. ಸಮಾಜದಲ್ಲಿ ಸಮಾನತೆ, ಅಲ್ಪಸಂಖ್ಯಾಂತರ ಹಕ್ಕುಗಳಿಗಾಗಿ ಹೋರಾಡುವವರನ್ನು ಕೊಲೆ ಮಾಡಿಸಲಾಗುತ್ತಿದೆ.

ಜಾತಿ ರಾಜಕಾರಣ ವಿರೋಧಿಸುತ್ತಿದ್ದ ಗೌರಿ ಲಂಕೇಶ್‌ರಿಗೆ ಇಂತಹ ಅಂತ್ಯ ಎದುರಾಗಿರುವುದು ಪ್ರಜಾಪ್ರಭುತ್ವದ ವಾಸ್ತವ ಚಿತ್ರಣವನ್ನು ಬಿಂಬಿಸುತ್ತಿದೆ ಎಂದರು. ನಗರ ಕಾಂಗ್ರೆಸ್‌ ಅಧ್ಯಕ್ಷ ಆರ್‌.ಮೂರ್ತಿ, ಪತ್ರಕರ್ತೆ ಗೌರಿ ಲಂಕೇಶ್‌ ತಂದೆ ಲಂಕೇಶ್‌ ಅವರ ಹಾದಿಯಲ್ಲಿ ಸಾಗುತ್ತಿದ್ದರು.

ಸಮಾಜದಲ್ಲಿನ ಬಡವರು, ಅಲ್ಪಸಂಖ್ಯಾತರ ಪರ ಹೆಚ್ಚಿನ ಕಾಳಜಿ ಹೊಂದಿ ಎಡಪಂಥೀಯ ವಿಚಾರಗಳಲ್ಲಿ ಹೆಚ್ಚು ನಂಬಿಕೆ ಹೊಂದಿದ್ದರು ಎಂದರು. ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಬಿ.ಸಿದ್ದರಾಜು, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷೆ ಮಲ್ಲಿಗೆ ವೀರೇಶ್‌, ಮುಖಂಡರಾದ ಶಿವಣ್ಣ, ಲೋಕೇಶ್‌ರಾವ್‌, ಮುಡಾ ಸದಸ್ಯ ಶಿವಮಲ್ಲು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next