Advertisement

ಅಭಿನಂದನಾ ಸಮಾರಂಭ ನಾಳೆ

12:16 PM Jul 27, 2018 | Team Udayavani |

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಮುಂಚೂಣಿ ಘಟಕಗಳ ಮಾಜಿ ಪದಾಧಿಕಾರಿಗಳ ಒಕ್ಕೂಟದ ವತಿಯಿಂದ ಜು.28ರಂದು ಕೆಪಿಸಿಸಿ ಹಾಗೂ ಎಐಸಿಸಿಗೆ ನೂತನವಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ.

Advertisement

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಎಂ.ನಾರಾಯಣಸ್ವಾಮಿ, ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಕಾರ್ಯಾಧ್ಯಕ್ಷ ಈಶ್ವರಖಂಡ್ರೆ ಹಾಗೂ ಎಐಸಿಸಿ ಕಾರ್ಯದರ್ಶಿ ಸಲಿಂ ಅಹಮದ್‌ ಅವರಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ವೀರಪ್ಪ ಮೊಯ್ಲಿ, ರಾಜ್ಯಸಭಾ ಸದಸ್ಯ ಬಿ.ಕೆಹರಿಪ್ರಸಾದ್‌ ಸೇರಿದಂತೆ ಸಚಿವರು ಹಾಗೂ ಶಾಸಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next