Advertisement

ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಿದ್ದಕ್ಕೆ ಅಭಿನಂದನೆ

06:30 AM Nov 29, 2018 | |

ಬೆಂಗಳೂರು: ಕಾವೇರಿ ನದಿಗೆ ಮೇಕೆದಾಟು ಬಳಿ ಅಣೆಕಟ್ಟು ಕಟ್ಟಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವುದಕ್ಕೆ ಅಭಿನಂದನೆ ಸಲ್ಲಿಸುವುದಾಗಿ ವಿಧಾನಸಭಾಧ್ಯಕ್ಷ ರಮೇಶ್‌ ಕುಮಾರ್‌ ತಿಳಿಸಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಮೇಕೆದಾಟು ಯೋಜನೆಯಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಸೇರಿದಂತೆ ಅನೇಕ ಭಾಗಗಳಿಗೆ ಅನುಕೂಲವಾಗಲಿದೆ. ಕೇಂದ್ರ ಸರ್ಕಾರದ ನಿರ್ಧಾರ ಕೋಲಾರ ಭಾಗದ ಜನತೆಗೆ ಸಮಾಧಾನ ತಂದಿದೆ ಎಂದು ಹೇಳಿದರು.

ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಹಿಂದೆ ಒಪ್ಪಂದಕ್ಕೆ ಸಹಿ ಮಾಡಿತ್ತು. ಈಗ ವಿರೋಧ ಮಾಡುತ್ತಿದೆ. ರಾಜ್ಯದ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಕ್ರಿಯಾಶೀಲರಾಗಿದ್ದಾರೆ. ಆದಷ್ಟು ಬೇಗ ವಿಸ್ತೃತ ಯೋಜನಾ ವರದಿ ಸಿದ್ದಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ, ಯೋಜನೆ ಆರಂಭಿಸಬೇಕು ಎಂದು ಹೇಳಿದರು.

ಬೆಳಗಾವಿಯ ಚಳಿಗಾಲದ ಅಧಿವೇಶದ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಆಹಾರದ ಬಗ್ಗೆ ಕಳೆದ ಬಾರಿ ಸಾಕಷ್ಟು ದೂರುಗಳು ಬಂದಿದ್ದು, ಈ ವರ್ಷ ಯಾವುದೇ ದೂರುಗಳು ಬಾರದ ರೀತಿಯಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ಬೆಳಗಾವಿಯಲ್ಲಿ ಶಾಸಕರ ಭವನ ನಿರ್ಮಾಣ ಮಾಡುವುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರ. ಈ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಎಲ್ಲ ಶಾಸಕರು ಅಧಿವೇಶನದಲ್ಲಿ ಪಾಲ್ಗೊಂಡು ಅವರ ಕ್ಷೇತ್ರಗಳ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು. ಅಧಿವೇಶನದಲ್ಲಿ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎಂಬ ಬೇರೆ ಬೇರೆ ಚರ್ಚೆ ಇಲ್ಲ. ಎಲ್ಲಿಯೇ ಅಧಿವೇಶನ ನಡೆದರೂ ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಬೇಕು ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next