Advertisement

ಪವಿತ್ರ ಮತ್ತು ಸುಭದ್ರ ಸರ್ಕಾರಕ್ಕೆ ಅಭಿನಂದನೆಗಳು; ಉಪಚುನಾವಣೆ ಫಲಿತಾಂಶಕ್ಕೆ HDK ಟ್ವೀಟ್

10:39 AM Dec 13, 2019 | Nagendra Trasi |

ಬೆಂಗಳೂರು: ಉಪಚುನಾವಣೆ ನಡೆದ ಹದಿನೈದು ಕ್ಷೇತ್ರಗಳ ಫಲಿತಾಂಶ ಹೊರಬಿದ್ದ ನಂತರ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಇದೊಂದು “ಅಸಹ್ಯ” ಸರ್ಕಾರ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಮೂದಲಿಸಿದ್ದ ಮಾತಿಗೆ ಸಹಮತ ವ್ಯಕ್ತಪಡಿಸುವಂತೆ ರಾಜ್ಯದ 15 ಕ್ಷೇತ್ರಗಳ ಪ್ರಜ್ಞಾವಂತ ಮತದಾರರು “ಪವಿತ್ರ” ಮತ್ತು “ಸುಭದ್ರ” ಸರ್ಕಾರಕ್ಕೆ ಮುದ್ರೆ ಒತ್ತಿರುವುದಕ್ಕೆ ಮನದಾಳದ ಅಭಿನಂದನೆಗಳು ಎಂದು ಟ್ವೀಟ್ ಮೂಲಕ ಪರೋಕ್ಷವಾಗಿ ಟೀಕಿಸಿದ್ದಾರೆ.

ಡಿಸೆಂಬರ್ 4ರಂದು ಕುಮಾರಸ್ವಾಮಿ ಮಾಡಿರುವ ಟ್ವೀಟ್ ನಲ್ಲಿ ನನ್ನ ನೇತೃತ್ವದಲ್ಲಿ ಮೈತ್ರಿ ಸರ್ಕಾರ ರಚನೆಯಾದ ಕೂಡಲೇ ಅತೃಪ್ತಗೊಂಡಿದ್ದ ಬಿಜೆಪಿ, ಅಧಿಕಾರದ ಹುಚ್ಚುಹಿಡಿಸಿಕೊಂಡು ಕೂಗುಮಾರಿಯಂತಾಗಿತ್ತು. ನಾನು ಮಾಡದ ತಪ್ಪುಗಳಿಗೆ ನನ್ನನ್ನು ಬಿಗಿಯುತ್ತಾ, ಆಡಳಿತ ಮಾಡಲು ಬಿಡದ ಬಿಜೆಪಿ ಅನರ್ಹರ ಅಕ್ರಮ ಸಂಬಂಧದೊಂದಿಗೆ ಅನೈತಿಕ ಸರ್ಕಾರ ರಚಿಸಿ ಈಗ ರಾಜ್ಯವನ್ನು ಅನಾಹುತದ ಹಾದಿಯಲ್ಲಿ ಕರೆದೊಯ್ಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.


ಹದಿನೈದು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದಲ್ಲಿ 12 ಬಿಜೆಪಿ, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಹಾಗೂ ಪಕ್ಷೇತರರು ಒಂದು ಕ್ಷೇತ್ರದಲ್ಲಿ ಜಯ ಸಾಧಿಸಿದ್ದು, ಜೆಡಿಎಸ್ ಮೂರು ಸ್ಥಾನಗಳನ್ನು ಕಳೆದುಕೊಂಡು ತೀವ್ರ ಮುಖಭಂಗ ಅನುಭವಿಸಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next