Advertisement
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪ ಮುಖ್ಯಮಂತ್ರಿಗಳಾದ ಡಾ.ಸಿ.ಎನ್. ಅಶ್ವತ್ಥನಾರಾಯಣ, ಗೋವಿಂದ ಕಾರಜೋಳ , ಸಚಿವರಾದ ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ಸಿ.ಪಿ.ಯೋಗೇಶ್ವರ್ ಸೇರಿ ಹಲವು ಅಭಿನಂದನೆ ಸಲ್ಲಿಸಿದ್ದಾರೆ.
Related Articles
Advertisement
ಡಾ.ಸಿ.ಎನ್.ಅಶ್ವತ್ಥನರಾಯಣ, ರಾಜ್ಯದಿಂದ ಹೆಚ್ಚು ಜನರಿಗೆ ಕೇಂದ್ರ ಸಂಪುಟದಲ್ಲಿ ಅವಕಾಶ ನೀಡಿರುವುದು ಸಂತಸದ ವಿಚಾರ. ರಾಜ್ಯದ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಪ್ರಧಾನಿ ನರೇಂದ್ರಮೋದಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ಪ್ರಧಾನಿ ನರೇಂದ್ರಮೋದಿಯವರು ರಾಜ್ಯದ ಜನತೆಗೆ ಸೂಕ್ತ ನ್ಯಾಯ ದೊರಕಿಸಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಕೇಂದ್ರ ಸಚಿವ ಸಂಪುಟ ವಿಸ್ತರಣೆಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯದ ಆರು ಸಂಸದರಿಗೆ ಅವಕಾಶ ನೀಡಿ ಸಮಗ್ರ ಕರ್ನಾಟಕದ ಸಾಮಾಜಿಕ ನ್ಯಾಯ ಎತ್ತಿ ಹಿಡಿಯಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಎಲ್ಲ ಭಾಗಕ್ಕೂ ಆದ್ಯತೆ ನೀಡಿರುವುದು ಶ್ಲಾಘನೀಯ. ಕೇಂದ್ರ ಸಂಪುಟದಲ್ಲಿ ರಾಜ್ಯಕ್ಕೆ ಹೆಚ್ಚು ಅವಕಾಶ ಸಿಕ್ಕಂತಾಗಿದೆ. ಎಲ್ಲರಿಗೂ ಅಭಿನಂದನೆ ಎಂದು ತಿಳಿಸಿದ್ದಾರೆ. ಯೋಗೇಶ್ವರ್ ಅಭಿನಂದನೆ
ಆಡಳಿತದ ಅನುಭವ ಇರುವ, ದಕ್ಷತೆ-ಪಾರದರ್ಶಕತೆ ಹಾಗೂ ಸಕ್ರಿಯವಾಗಿ ಉತ್ಸಾಹದಿಂದ ಕೆಲಸ ಮಾಡುತ್ತಿರುವ ಎಲ್ಲರಿಗೂ ಕೇಂದ್ರ ಸಚಿವ ಸ್ಥಾನ ನೀಡಿರುವುದು ಸಂತೋಷದ ಸಂಗತಿ. ನೂತನ ಸಚಿವರು ರಾಷ್ಟ್ರ ಅದರಲ್ಲೂ ರಾಜ್ಯದ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎಂದು ಆಶಿಸುತ್ತೇನೆ. ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ಪ್ರಸ್ತಾವನೆಗಳ ಮಂಜೂರಾತಿ ಸಂಬಂಧ ಗಮನಹರಿಸಬೇಕು ಎಂದು ಪರಿಸರ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಮನವಿ ಮಾಡಿದ್ದಾರೆ.