ಮಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಅನೇಕ ಜನಪರ ಹಾಗೂ ವಿನೂತನ ಕಾರ್ಯಕ್ರಮಗಳನ್ನು ರೂಪಿಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೀಡಿರುವ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದೆ. ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದ ಮೂಲಕ ಕಾಂಗ್ರೆಸ್ ಸರಕಾರದ ಸಾಧನೆಗಳನ್ನು ಜನರ ಬಳಿಗೆ ಕೊಂಡೊಯ್ಯಲಾಗುತ್ತಿದೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಪಕ್ಷದ ಮೈಸೂರು ವಿಭಾಗ ಉಸ್ತುವಾರಿ ವಿಷ್ಣುನಾಥನ್ ಹೇಳಿದರು.
ದಕ್ಷಿಣ ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಶಿವಬಾಗ್‌ನಲ್ಲಿ ಶನಿವಾರ ಉದ್ಘಾಟನೆಗೊಂಡ ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್‌ಸೇಠ್ , ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್, ವಿಧಾನ ಪರಿಷತ್ ಸದಸ್ಯ ಜಬ್ಟಾರ್ ಖಾನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ’ಸೋಜಾ, ಶಾಸಕ ಜೆ.ಆರ್. ಲೋಬೋ, ಮುಡಾ ಅಧ್ಯಕ್ಷ ಸುರೇಶ್ ಬಲ್ಲಾಳ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್. ಖಾದರ್, ಕೆಪಿಸಿಸಿ ದ.ಕ. ಜಿಲ್ಲಾ ಉಸ್ತುವಾರಿ ಯು.ಬಿ. ವೆಂಕಟೇಶ್, ಕೆಪಿಸಿಸಿ ಕಾರ್ಯದರ್ಶಿ ಕಳ್ಳಿಗೆ ತಾರಾನಾಥ ಶೆಟ್ಟಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಮನಪಾ ಉಪಮೇಯರ್ ರಜನೀಶ್, ಸ್ಥಾಯೀ ಸಮಿತಿ ಅಧ್ಯಕ್ಷರಾದ ನಾಗವೇಣಿ, ಅಬ್ವುಲ್ ರವೂಫ್, ಸಬಿತಾ ಮಿಸ್ಕಿತ್, ಮನಪಾ ಸದಸ್ಯರಾದ ಭಾಸ್ಕರ್, ನವೀನ್ ಡಿ’ಸೋಜಾ, ಅಪ್ಪಿ, ಅಶೋಕ್ ಡಿ.ಕೆ., ಕೇಶವ ಮರೋಳಿ, ಎ.ಸಿ. ವಿನಯರಾಜ್, ಅಬ್ದುಲ್ ಲತೀಫ್, ಪ್ರವೀಣ್‌ಚಂದ್ರ ಆಳ್ವ, ಆಶಾ ಡಿ’ಸಿಲ್ವ, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಸಲೀಂ, ಡಿಸಿಸಿ ಕಾರ್ಯದರ್ಶಿ ಸಂತೋಷ್ ಕುಮಾರ್ ಶೆಟ್ಟಿ, ಸುಧೀರ್ ಟಿ.ಕೆ., ಡೆನ್ನಿಸ್ ಡಿ’ಸಿಲ್ವ, ನಜೀರ್ ಬಜಾಲ್ ಮತ್ತಿತರರು ಉಪಸ್ಥಿತರಿದ್ದರು.
ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಮನೆಮನೆಗೆ ತೆರಳಿ ಕಾಂಗ್ರೆಸ್ ಪಕ್ಷದ ಹಾಗೂ ಸರಕಾರದ ಸಾಧನೆಗಳನ್ನು ಒಳಗೊಂಡಿರುವ ಪುಸ್ತಿಕೆಯನ್ನು ನೀಡಿ ಬೆಂಬಲ ಕೋರಿದರು.