Advertisement

ಕಾಂಗ್ರೆಸ್‌ ಕಾರ್ಯಕರ್ತ ಕೊಲೆ ಪ್ರಕರಣ: 19 ಮಂದಿಗೆ ಜೀವಾವಧಿ ಶಿಕ್ಷೆ

03:45 AM Jan 14, 2017 | Team Udayavani |

ಕೋಲಾರ: ಎಂಟು ವರ್ಷಗಳ ಹಿಂದೆ ಕೋಲಾರ ತಾಲೂಕಿನ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಎಸ್‌.ಅಗ್ರಹಾರದಲ್ಲಿ ರಾಜಕೀಯ ದ್ವೇಷದಿಂದ ನಡೆದ ಕೊಲೆಯ 19 ದೋಷಿಗಳಿಗೆ ಕೋಲಾರ 2ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ತಲಾ 10 ಸಾವಿರ ರೂ. ದಂಡ ವಿಧಿಸಿದೆ.

Advertisement

2008ರ ಮೇ 25ರಂದು ಶ್ರೀನಿವಾಸಪುರ ಕ್ಷೇತ್ರದಿಂದ ಗೆದ್ದ ಜೆಡಿಎಸ್‌ ಅಭ್ಯರ್ಥಿ ಪರ ಜೆಡಿಎಸ್‌ ಕಾರ್ಯಕರ್ತರು ಎಸ್‌.ಅಗ್ರಹಾರದಲ್ಲಿ ವಿಜಯೋತ್ಸವ ಆಚರಿಸುತ್ತಿದ್ದರು. ಇದಕ್ಕೆ ಕಾಂಗ್ರೆಸ್‌ ಕಾರ್ಯಕರ್ತ ಪೆರುಮಾಳ್‌ ಅಡ್ಡಿಪಡಿಸಿದ್ದರು. ಈ ವೇಳೆ ಜೆಡಿಎಸ್‌ ಕಾರ್ಯಕರ್ತರು ಪೆರುಮಾಳ್‌ ಹಾಗೂ ಆತನ ರಕ್ಷಣೆಗೆ ಬಂದ ಪೆರುಮಾಳ್‌ನ ಕುಟುಂಬ ಹಾಗೂ ಇತರ 9 ಮಂದಿ ಮೇಲೆ ತೀವ್ರವಾಗಿ ಹಲ್ಲೆ ಮಾಡಿದ್ದರು. ಘರ್ಷಣೆಯಲ್ಲಿ ಪೆರುಮಾಳ್‌ ಸ್ಥಳದಲ್ಲೇ ಮೃತಪಟ್ಟಿದ್ದನು.

ಪೆರುಮಾಳ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌.ಅಗ್ರಹಾರದ 24 ಮಂದಿಯ ವಿರುದ್ದ ಪೆರುಮಾಳ್‌ ಕುಟುಂಬದವರು ದೂರು ದಾಖಲಿಸಿದ್ದರು. ಸುಮಾರು 8 ವರ್ಷಗಳ ಕಾಲ ಪ್ರಕರಣದ ವಿಚಾರಣೆ ನಡೆಸಿದ ಕೋಲಾರದ ಜಿಲ್ಲಾ 2ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಶುಕ್ರವಾರ ತೀರ್ಪು ಪ್ರಕಟಿಸಿದೆ. ಪ್ರಕರಣದ 24 ಮಂದಿ ಆರೋಪಿಗಳ ಪೈಕಿ ಇಬ್ಬರು ಮೃತಪಟ್ಟಿದ್ದು, ಮಹಿಳೆ ಸೇರಿದಂತೆ ಮೂವರನ್ನು ಖುಲಾಸೆಗೊಳಿಸಿದೆ. ಉಳಿದವರಲ್ಲಿ ಒಬ್ಬ ಮಹಿಳೆಯೂ ಸೇರಿದಂತೆ 19 ಮಂದಿಯನ್ನು ಅಪರಾಧಿಗಳೆಂದು ಘೋಷಿಸಿ ಎಲ್ಲರಿಗೂ ಜೀವಾವಧಿ ಶಿಕ್ಷೆ ಮತ್ತು ತಲಾ 10 ಸಾವಿರ ದಂಡವನ್ನು ವಿಧಿಸಿತು.

Advertisement

Udayavani is now on Telegram. Click here to join our channel and stay updated with the latest news.

Next