Advertisement

ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

02:48 PM Aug 22, 2020 | Suhan S |

ಹುನಗುಂದ: ರೈತ ವಿರೋಧಿ ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ತಕ್ಷಣವೇ ಹಿಂಪಡೆಯಬೇಕು ಮತ್ತು ಕೋವಿಡ್ ನಿಯಂತ್ರಣದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತನಿಖೆ ನಡೆಸುವಂತೆ ಒತ್ತಾಯಿಸಿ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ನೇತೃತ್ವದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಉಪತಹಶೀಲಾರ್‌ ಎಲ್‌.ಎನ್‌.ಮಲ್ಲಾರ ಅವರಿಗೆ ಮನವಿ ಸಲ್ಲಿಸಿದರು.

Advertisement

ವಿಜಯಾನಂದ ಕಾಶಪ್ಪನವರ ಮಾತನಾಡಿ, ಕೋವಿಡ್‌-19 ಮನುಕುಲವನ್ನು ತಲ್ಲಣಗೊಳಿಸಿದ್ದು. ಕೊರೊನಾ ನಿಯಂತ್ರಣದಲ್ಲಿ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ರಾಜ್ಯದ ಆರೋಗ್ಯ ವ್ಯವಸ್ಥೆ ಕುಸಿದು ಹೋಗಿದೆ. ಇದರಿಂದ ಬಡ ಜನರ ಪರಿಸ್ಥಿತಿ ದೇವರೇ ಬಲ್ಲ ಇದರ ಬಗ್ಗೆ ಸೂಕ್ತ ನ್ಯಾಯಾಂಗ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರ ರೈತ ಮತ್ತು ಕಾರ್ಮಿಕ ವಿರೋಧಿ  ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳನ್ನು ಸುಗ್ರೀವಾಜ್ಞೆಗಳ ಮೂಲಕ ಜಾರಿಗೆ ತಂದು ರೈತರನ್ನು ಮತ್ತು ಕಾರ್ಮಿಕರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರ ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ವಿಫಲವಾಗಿದೆ. ಈಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು. ಕೇಂದ್ರ ಸರ್ಕಾರ ಜಾರಿಗೆ ತಂದ ರೈತ ವಿರೋಧಿ  ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಗಂಗಾಧರ ದೊಡಮನಿ, ಕೆಪಿಸಿಸಿ ತಾಲೂಕು ಅಧ್ಯಕ್ಷ ಸಂಯೋಜಕ ನಿಸಾರಹ್ಮದ್‌ ಖಾಜಿ, ಹುನಗುಂದ ತಾಪಂ ಅಧ್ಯಕ್ಷ ಅನಿಲಕುಮಾರ ನಾಡಗೌಡ್ರ, ಇಳಕಲ್ಲ ತಾಪಂ ಅಧ್ಯಕ್ಷೆ ಶಾರದಾ ಗೋಡಿ, ಉಪಾಧ್ಯಕ್ಷ ಮಹಾಂತೇಶ ಪಾಟೀಲ, ತಾ.ಪಂ ಸದಸ್ಯ ಮಂಜುನಾಥ ಗೌಡರ, ಮಹಿಳಾ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷೆ ದೀಪಾ ಸುಂಕದ, ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷ ಮುತ್ತಣ್ಣ ಕಲಗೋಡಿ, ಇಳಕಲ್ಲ ನಗರಸಭೆ ಸದಸ್ಯ ಸುರೇಶ ಜಗ್ಲಿ,ವಿ .ಮ.ಬ್ಯಾಂಕ್‌ ನಿರ್ದೇಶಕ ರವಿ ಹುಚನೂರ, ಪುರಸಭೆ ಮಾಜಿ ಸದಸ್ಯ ರಾಜು ಬಡಿಗೇರ ಅನೇಕರು ಪ್ರತಿಭಟನೆಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next