Advertisement

ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ‌‌ ಇಟ್ಟವರು ಕಾಂಗ್ರೆಸ್ ಕಾರ್ಯಕರ್ತರು: ಬಿಜೆಪಿ

09:36 AM Dec 19, 2021 | Team Udayavani |

ಬೆಂಗಳೂರು: ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ‌‌ ಇಟ್ಟವರು ಕಾಂಗ್ರೆಸ್ ಕಾರ್ಯಕರ್ತರು. ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಂಚು ನಡೆಸಿದ್ದೂ ಕಾಂಗ್ರೆಸ್ ಕಾರ್ಯಕರ್ತರು. ಇವರ ಕೃತ್ಯ, ಉದ್ದೇಶ ಹಾಗೂ ಹಿಂದಿರುವ ಶಕ್ತಿಗಳು ಕಾಂಗ್ರೆಸ್ಸಿಗರೇ ಎನ್ನುವ ಸಂಶಯ ರಾಜ್ಯದ ಜನತೆಯನ್ನು‌ ಕಾಡುತ್ತಿದೆ ಎಂದು ಬಿಜೆಪಿ ಆರೋಪ ಮಾಡಿದೆ.

Advertisement

ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ವಿರುದ್ಧ ಆರೋಪ ಮಾಡಿರುವ ಬಿಜೆಪಿ, ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ ಪ್ರಕರಣ ಹಾಗೂ ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜ ಸುಟ್ಟಿದ್ದಕ್ಕೆ ಡಿ.ಕೆ.ಶಿವಕುಮಾರ್ ಅವರು ಯಾಕೆ ಪ್ರತಿಕ್ರಿಯೆ ನೀಡಿಲ್ಲ ಎನ್ನುವುದಕ್ಕೆ ಕಾರಣ ಸ್ಪಷ್ಟವಾಗಿದೆ. ಎಲ್ಲದಕ್ಕೂ ಉತ್ತರ ಒಂದೇ. ಅದರ ಹಿಂದಿರುವ ವ್ಯಕ್ತಿಗಳೆಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕೆಪಿಸಿಸಿ ಅಧ್ಯಕ್ಷರ ಹಿಂದೆ ನಿಂತವರು ಎಂದಿದೆ.

ಇದನ್ನೂ ಓದಿ:ಬೆಳಗಾವಿಯಲ್ಲಿ ಉದ್ದೇಶಪೂರ್ವಕವಾಗಿ ಗಲಭೆ ಮಾಡಲಾಗುತ್ತಿದೆ: ಬಿ.ಎಸ್.ಯಡಿಯೂರಪ್ಪ

Koo App

ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ ಪ್ರಕರಣ ಹಾಗೂ ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜ ಸುಟ್ಟಿದ್ದಕ್ಕೆ @dkshivakumar_official ಅವರು ಏಕೆ ಪ್ರತಿಕ್ರಿಯೆ ನೀಡಿಲ್ಲ ಎನ್ನುವುದಕ್ಕೆ ಕಾರಣ ಸ್ಪಷ್ಟವಾಗಿದೆ. ಎಲ್ಲದಕ್ಕೂ ಉತ್ತರ ಒಂದೇ. ಅದರ ಹಿಂದಿರುವ ವ್ಯಕ್ತಿಗಳೆಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕೆಪಿಸಿಸಿ ಅಧ್ಯಕ್ಷರ ಹಿಂದೆ ನಿಂತವರು.

Advertisement

BJP KARNATAKA (@BJP4Karnataka) 18 Dec 2021

ಸಿದ್ದರಾಮಯ್ಯನವರೇ, ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದವರು ಯಾರಿಗೆ ಆಪ್ತರು ಎನ್ನುವುದನ್ನು ಗಮನಿಸಿ! ಈಗ ನಿಮ್ಮ “ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ” ಏನು ಎಂದು ಬಿಜೆಪಿ ಪ್ರಶ್ನೆ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.