Advertisement

Congress ಲೋಕಸಭೆ ಚುನಾವಣೆಯಲ್ಲಿ ಗೆಲುವೇ ಗುರಿ: ಮೈಮರೆಯುವುದು ಬೇಡ

01:45 AM Aug 15, 2023 | Team Udayavani |

ಬೆಂಗಳೂರು: ವಿಧಾನಸಭೆ ಚುನಾ ವಣೆಯಲ್ಲಿ ಗೆದ್ದಂತೆ ಎಲ್ಲ ಚುನಾವಣೆಗಳಲ್ಲಿಯೂ ಗೆಲ್ಲುತ್ತೇವೆ ಎಂಬ ಆಲೋಚನೆ ದೂರ ಮಾಡಿ. ಹಿಂದಿನ ಗೆಲುವಿನಿಂದಾಗಿ ನಾವು ಮೈಮರೆಯುವಂತಿಲ್ಲ. ನಮ್ಮ ಗುರಿ 2024ರ ಲೋಕಸಭಾ ಚುನಾವಣೆ. ಸರಕಾರದ ಗ್ಯಾರಂಟಿಗಳ ಜಾರಿಯಿಂದ ಸಿಕ್ಕಿರುವ ಶಕ್ತಿಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಿ. ಅದರೊಂದಿಗೆ ಚುನಾವಣೆಗೆ ಸಿದ್ಧರಾಗಿ…

Advertisement

– ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಸರ್ವ ಸದಸ್ಯರ ಸಭೆಯಲ್ಲಿ ಪದಾಧಿಕಾರಿಗಳಿಗೆ ಮುಂದಿ ರುವ ಚುನಾವಣ ಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ ಆದಿಯಾಗಿ ಪಕ್ಷದ ನಾಯಕರು ಮಾಡಿದ ಸಿದ್ಧತೆ ಪಾಠದ ಸಾರ ಇದು.

ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸೀಟು ಗೆಲ್ಲುವುದಾಗಿ ಹೈಕಮಾಂಡ್‌ಗೆ ಭರವಸೆ ನೀಡಿದ್ದೇವೆ. ಅದಕ್ಕೆ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರ ಸಹಕಾರ ತುಂಬಾ ಮುಖ್ಯ. ವಿಧಾನಸಭೆ ಚುನಾವಣೆಯಲ್ಲಿ ಬೂತ್‌ ಮಟ್ಟದಲ್ಲಿ ಬಿಜೆಪಿ, ಜೆಡಿಎಸ್‌ಗಳನ್ನು ಸೋಲಿಸಲು ಶ್ರಮಿಸಿದಂತೆ ಈಗಲೂ ಸರಕಾರದ ನೆರವು ಪಡೆದು ಪಕ್ಷ ಸಂಘಟನೆ ಮಾಡಬೇಕು. ಪ್ರತೀ ಬೂತ್‌ನಲ್ಲಿ ಬೇರೆ ಪಕ್ಷದವರನ್ನು ಕಾಂಗ್ರೆಸ್‌ನತ್ತ ಸೆಳೆದು ಮತಪ್ರಮಾಣವನ್ನು ಹೆಚ್ಚಳ ಮಾಡಿಕೊಳ್ಳಬೇಕು. ನಮ್ಮ ಗುರಿ ಏನಿದ್ದರೂ 2024ರ ಚುನಾವಣೆ ಆಗಿರಬೇಕು ಎಂದು ಕಿವಿಮಾತು ಹೇಳಿದರು.

ತಾಳ್ಮೆಯಿಂದಿರಿ;
ಬದಲಾವಣೆಗೆ ಕಾಯಿರಿ
ನಮ್ಮ ಗುರಿ ಸಾಧನೆಗೆ ಕಾರ್ಯಕರ್ತರ ಸಹಕಾರ ಮುಖ್ಯ. ನೀವೆಲ್ಲರೂ ತಾಳ್ಮೆಯಿಂದ ಇರಿ. ಮುಂದಿನ ದಿನಗಳಲ್ಲಿ ಕೆಪಿಸಿಸಿಯಲ್ಲಿ ಬದಲಾವಣೆ ಮಾಡಬೇಕಾಗುತ್ತದೆ. ಕೆಲವು ಸಚಿವರನ್ನು ಬದಲಾಯಿಸ ಬೇಕಾಗುತ್ತದೆ. ಪಕ್ಷಕ್ಕೆ ಕೊಡುಗೆ ನೀಡದವರನ್ನು ಬದಲಾವಣೆ ಮಾಡಲೇಬೇಕಾಗುತ್ತದೆ. ಬ್ಲಾಕ್‌ ನಿಂದ ಜಿÇÉಾ ಹಾಗೂ ಕೆಪಿಸಿಸಿ ಮಟ್ಟದವರೆಗೂ ಬದಲಾವಣೆ ಮಾಡಲಾಗುವುದು ಎಂದು ಡಿಕೆಶಿ ಹೇಳಿದರು. ಪಕ್ಷ ಅಧಿಕಾರಕ್ಕೆ ಬಂದು ನಮಗೆ ಏನು ಸಿಕ್ಕಿದೆ ಎಂಬ ಪ್ರಶ್ನೆ ನಿಮ್ಮ ಮನಸ್ಸಿನಲ್ಲಿದೆ ಎಂಬುದು ನಮಗೆ ಗೊತ್ತಿದೆ. ನೀವು ಅಧಿಕಾರ ಕೇಳುವ ಮುನ್ನ ಜವಾಬ್ದಾರಿಯನ್ನೂ ನಿಭಾಯಿಸಬೇಕಾಗುತ್ತದೆ ಎಂದು ಸೂಚ್ಯವಾಗಿ ಹೇಳಿದರು.

ಲೋಕಸಭೆ ಮಾತ್ರವಲ್ಲ; ನಮ್ಮ ಮುಂದಿರುವ ಮತ್ತೂಂದು ಸವಾಲು ತಾ.ಪಂ., ಜಿ.ಪಂ. ಹಾಗೂ ಪಾಲಿಕೆ ಚುನಾವಣೆ. ಯಾವುದೇ ಕ್ಷಣದಲ್ಲಿ ಚುನಾವಣೆ ಬಂದರೂ ಎದುರಿಸಲು ಸಿದ್ಧರಿರಬೇಕು. ಚುನಾವಣೆ ಸಮಯದಲ್ಲಿ ಸಾವಿರಾರು ಮಂದಿ ಅರ್ಜಿ ಹಾಕಿದ್ದಿರಿ. ಎಲ್ಲರಿಗೂ ಅವಕಾಶ ನೀಡಲು ಆಗಿಲ್ಲ. ನಮ್ಮ ಆಯ್ಕೆಗೆ ಫ‌ಲಿತಾಂಶವೇ ಸಾಕ್ಷಿ ಎಂದರು.

Advertisement

20 ಸ್ಥಾನ ಖಚಿತ;
ಬಿಜೆಪಿ ಸೋಲು ನಿಶ್ಚಿತ
ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಸಭಾ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಇದನ್ನು ಅನುಭವ ದಿಂದ ಹೇಳುತ್ತಿದ್ದೇನೆ. 2024ರಲ್ಲಿ ಕೇಂದ್ರದಲ್ಲಿ ಬಿಜೆಪಿ ಸೋಲುತ್ತದೆ ಎಂದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮಾತನಾಡಿ, ಐದು ಗ್ಯಾರಂಟಿಗಳು ಪಕ್ಷಕ್ಕೆ ಅತ್ಯಂತ ದೊಡ್ಡ ಶಕ್ತಿ ನೀಡಿವೆ. ನಿಮಗೆ ಸಿಕ್ಕಿರುವ ಈ ಶಕ್ತಿಯ ಬಗ್ಗೆ ಅರಿವಿದೆಯೋ ಇಲ್ಲವೋ; ಆದರೆ ವಿಪಕ್ಷದವರಿಗೆ ಅರಿವಾಗಿದೆ. ಬೇರೆ ರಾಜ್ಯದ ಮುಖ್ಯಮಂತ್ರಿಗಳಾದ ಮಮತಾ ಬ್ಯಾನರ್ಜಿ ಹಾಗೂ ಸ್ಟಾಲಿನ್‌ ಕೂಡ ನಮ್ಮ ಯೋಜನೆಗಳನ್ನು ಶ್ಲಾ ಸಿ¨ªಾರೆ. ಈ ಗ್ಯಾರಂಟಿ ಯೋಜನೆಗಳಿಗೆ 50 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಇದನ್ನು ಸಮರ್ಪಕವಾಗಿ ಬಳಸಿಕೊಂಡು 2024ರ ಚುನಾವಣೆಯಲ್ಲಿ ಗೆಲುವಿನ ಗುರಿ ತಲುಪಬೇಕಿದೆ ಎಂದು ಸಲಹೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next