ಪಣಜಿ : ಗೋವಾ ವಿಧಾನ ಸಭಾ ಚುನಾವಣೆಗೆ ಗೋವಾಕ್ಕೆ ಆಗಮಿಸಿರುವ ಕಾಂಗ್ರೇಸ್ ರಾಷ್ಟ್ರೀಯ ನಾಯಕ ಪಿ.ಚಿದಂಬರಂ ರವರು ಪಣಜಿಯ ಖಾಸಗಿ ಹೋಟೆಲ್ ವೊಂದರಲ್ಲಿ ರಾಜ್ಯ ಕಾಂಗ್ರೇಸ್ ಶಾಸಕರು, ಸಂಸದರು, ಮಾಜಿ ಶಾಸಕರೊಂದಿಗೆ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ.
ಇದನ್ನೂ ಓದಿ : ಸಿಖ್, ಹಿಂದೂಗಳು ಸೇರಿ 140 ಭಾರತೀಯರು ಅಫ್ಘಾನ್ ಬಿಟ್ಟು ತೆರಳದಂತೆ ತಾಲಿಬಾನ್ ತಡೆ!
ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಗೋವಾದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಗೋವಾದ ಸ್ಥಳೀಯ ಪಕ್ಷಗಳೊಂದಿಗೆ ಕಾಂಗ್ರೇಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದೇ ಹೇಳಲಾಗುತ್ತಿದೆ. ಈ ನಿಟ್ಟಿನಲ್ಲಿ ಪಿ.ಚಿದಂಬರಂ ರವರು ಚರ್ಚೆ ನಡೆಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಚಿದಂಬರಂ ರವರು ಖಾಸಗಿ ಹೋಟೆಲ್ ನಲ್ಲಿ ನಡೆಸಿದ ಸಭೆಯಲ್ಲಿ ಪ್ರತಿಪಕ್ಷದ ನಾಯಕ ದಿಗಂಬರ್ ಕಾಮತ್, ಗೋವಾ ಪ್ರದೇಶ ಕಾಂಗ್ರೇಸ್ ಸಮೀತಿಯ ಅಧ್ಯಕ್ಷ ಗಿರೀಶ್ ಚೋಡಣಕರ್ ಸೇರಿದಂತೆ ಶಾಸಕರು, ಮಾಜಿ ಶಾಸಕರು ಪಾಲ್ಗೊಂಡಿರುವುದು ಈಗ ಗೋವಾ ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಇದನ್ನೂ ಓದಿ : ಕಾರಾಗೃಹಗಳಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ವಿರುದ್ದ ಕಠಿಣ ಕ್ರಮ: ಆರಗ ಜ್ಞಾನೇಂದ್ರ