Advertisement

ಗಲಭೆಕೋರರ ನೆರವಿಗೆ ನಿಲ್ಲುವುದು ಕಾಂಗ್ರೆಸ್ ನಿಲುವು: ಸಿಎಂ ಬೊಮ್ಮಾಯಿ

02:21 PM Apr 30, 2022 | Team Udayavani |

ನವದೆಹಲಿ: ಹುಬ್ಬಳ್ಳಿ ಗಲಭೆ ಪ್ರಕಾರದಲ್ಲಿ ಬಂಧಿತರ ನೆರವಿಗೆ ಧಾವಿಸಿರುವುದು ಶಾಸಕ ಜಮೀರ್ ಅಹಮದ್ ಹಾಗೂ ಅವರ ಪಕ್ಷದ ನಿಲುವು. ಗಲಭೆ ಮಾಡಿದವರ ಜೊತೆ ನಿಲ್ಲುವ ಕೆಲಸವನ್ನು ಮೊದಲಿನಿಂದಲೂ ಅವರು ಮಾಡಿಕೊಂಡೇ ಬಂದಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.

Advertisement

ನವದೆಹಲಿಗೆ ಆಗಮಿಸಿ ಕರ್ನಾಟಕ ಭವನದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಹುಬ್ಬಳ್ಳಿ ಪ್ರಕರಣದಲ್ಲಿ ಶಾಸಕ ಜಮೀರ್ ಅಹಮದ್ ಖಾನ್ ಅವರು ಬಂಧಿತರ ನೆರವಿಗೆ ಧಾವಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ‘ಇದು ಮೊದಲ ಬಾರಿ ಏನಲ್ಲ. ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣದಲ್ಲಿಯೂ ಅದನ್ನೇ ಮಾಡಿದ್ದರು. ಅದು ಅವರ ಮತ್ತು ಅವರ ಪಕ್ಷದ ನಿಲುವು. ಅವರು ಕಾಂಗ್ರೆಸ್ ಪಕ್ಷದ ಶಾಸಕರು ಹಾಗೂ ಅವರ ನಾಯಕರು ಅದರ ಬಗ್ಗೆ ಯಾವುದೇ ಸ್ಪಷ್ಟೀಕರಣ ಕೂಡ ನೀಡದೇ ಇರುವುದರಿಂದ ಅವರ ನಿಲುವು ತಿಳಿಯುತ್ತದೆ ಎಂದರು.

ಇದನ್ನೂ ಓದಿ:ಕೆಪಿಎಸ್ಸಿ ನೇಮಕದಲ್ಲೂ ಭ್ರಷ್ಟಾಚಾರ :ತಮ್ಮದೇ ಸರ್ಕಾರದ ವಿರುದ್ಧ ಯತ್ನಾಳ್ ಕಿಡಿ

ಕೇಂದ್ರ ಗೃಹ ಸಚಿವರು ರಾಜ್ಯಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಪಿ.ಎಫ್ .ಐ, ಎಸ್.ಡಿ.ಪಿ.ಐ ಸಂಘಟನೆಗಳನ್ನು ಬ್ಯಾನ್ ಮಾಡುವ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಅಲ್ಲಿ ಚರ್ಚೆಯಾಗುವುದಿಲ್ಲ. ಪಿ.ಎಫ್.ಐ ಕರ್ನಾಟಕದಲ್ಲಿ ಮಾತ್ರವಲ್ಲ ಅವರ ಚಟುವಟಿಕೆಗಳು ಸೀಮಿತವಾಗಿಲ್ಲ. ಉತ್ತರ ಪ್ರದೇಶ, ಕೇರಳ,  ಮಹಾರಾಷ್ಟ್ರದಲ್ಲಿಯೂ ಇದೆ. ಅದರ ಸಮಗ್ರ ಚಟುವಟಿಕೆಗಳ ಗೃಹ ಇಲಾಖೆ ಕ್ರಮ ಕೈಗೊಳ್ಳುತ್ತದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next