Advertisement
ಅಥಣಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆ ಫಲಿತಾಂಶದ ಅನಂತರ ರಾಜ್ಯದಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆಯಲಿವೆ. ಸರಕಾರ ರಚನೆ ವಿಷಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗಳನ್ನು ಗಮನಿಸಿದ್ದೇನೆ. ಈಗ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಯಾವುದೇ ಪಕ್ಷ ಮತ್ತು ನಾಯಕರಿಗೆ ಸಿದ್ಧಾಂತ ಹಾಗೂ ಬದ್ಧತೆ ಮೇಲೆ ನಂಬಿಕೆ ಉಳಿದಿಲ್ಲ. ಪಕ್ಷ ನಿಷ್ಠೆ ಮಾಯವಾಗಿದೆ. ಸಮಯಕ್ಕೆ ತಕ್ಕಂತೆ ನಾಯಕರು ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದಾರೆ ಎಂದರು.
ನಮ್ಮ ಸರಕಾರದ ಅವಧಿಯಲ್ಲಿ ಯಾವ ಕ್ಷೇತ್ರಕ್ಕೂ ತಾರತಮ್ಯ ಮಾಡಿಲ್ಲ. ಅವರ ಬೇಡಿಕೆಗೆ ಅನುಗುಣವಾಗಿ ಅನುದಾನ ಬಿಡುಗಡೆ ಮಾಡಲಾಗಿತ್ತು. ಅದೇ ರೀತಿ ಅಥಣಿ ಕ್ಷೇತ್ರಕ್ಕೂ ಅನುದಾನ ಕೊಟ್ಟಿದ್ದೆ. ಆದರೆ ಮಹೇಶ ಕುಮಟಳ್ಳಿ ಅವರು ರಮೇಶ್ ಜಾರಕಿಹೊಳಿ ಅವರಿಗೆ ಕೊಟ್ಟ ಮಾತು ಉಳಿಸಿಕೊಳ್ಳಲು ಪಕ್ಷ ಬಿಟ್ಟು ಹೋದರು ಎಂದು ಕುಮಾರಸ್ವಾಮಿ ಹೇಳಿದರು.