Advertisement
ರಾಹುಲ್ ಗಾಂಧಿ ಲೋಕಸಭಾ ಕಲಾಪದಲ್ಲಿ ನೀಡಿರುವ ಹಿಂದೂ ವಿರೋಧಿ ಹೇಳಿಕೆಯನ್ನು ಖಂಡಿಸಿ, ದ.ಕ.ಜಿಲ್ಲಾ ಬಿಜೆಪಿ ಯುವ ಮೋರ್ಚಾವು ಕಾವೂರು ಜಂಕ್ಷನ್‌ನಲ್ಲಿ ಸೋಮವಾರ ಆಯೋಜಿಸಿದ ಪ್ರತಿಭಟನಾ ಸಭೆಯನ್ನು ದ್ದೇಶಿಸಿ ಅವರು ಮಾತನಾಡಿದರು.
Related Articles
Advertisement
ಅಧ್ಯಕ್ಷತೆ ವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಲೋಕಸಭೆಯಲ್ಲಿ ಹಿಂದೂವಿರೋಧಿ ಹೇಳಿಕೆ ನೀಡಿರುವ ರಾಹುಲ್ ಗಾಂಧಿ ಅವರು ಒಂದು ಧರ್ಮದ ಓಲೈಕೆಯ ಪ್ರಯತ್ನದಲ್ಲಿದ್ದಾರೆ ಎಂದರು. ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಕ್ಷಿತ್ ಆರ್. ಪೂಜಾರಿ, ಜಿಲ್ಲಾಧ್ಯಕ್ಷ ನಂದನ್ ಮಯ್ಯ, ಪ್ರಧಾನ ಕಾರ್ಯದರ್ಶಿ ಕಿಶೋರ್ ಬೊಟ್ಯಾಡಿ, ಪ್ರೇಮಾನಂದ ಶೆಟ್ಟಿ, ಯತೀಶ್ ಆಳ್ವ, ಜಿಲ್ಲಾ ಯುವ ಮೋರ್ಚಾದ ಉಪಾಧ್ಯಕ್ಷ ಭರತರಾಜ್ ಕೃಷ್ಣಾಪುರ, ಮಂಗಳೂರು ಬಿಜೆಪಿ ಉತ್ತರ ಮಂಡಲ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಮಂಗಳೂರು ನಗರ ಪಾಲಿಕೆಯ ಕಾರ್ಪೊರೇಟರ್‌ಗಳು, ಮಹಿಳಾ ಮೋರ್ಚಾ ಹಾಗೂ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತಿತರರು ಭಾಗವಹಿಸಿದ್ದರು.