Advertisement

ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಸಿ: ರಾಜ್ಯ ಚುನಾವಣಾ ಆಯುಕ್ತರಿಗೆ ಕಾಂಗ್ರೆಸ್ ಮನವಿ

11:46 AM May 22, 2020 | keerthan |

ಬೆಂಗಳೂರು: ಕೋವಿಡ್-19 ಕಾರಣ ಅವಧಿ ಪೂರ್ಣಗೊಳ್ಳುವ ಗ್ರಾಮ ಪಂಚಾಯಿತಿಗಳಿಗೆ ಸದಸ್ಯರನ್ನು ನಾಮ ನಿರ್ದೇಶನ ಮಾಡಲು ಅವಕಾಶ ನೀಡದಂತೆ ಮತ್ತು ಪಂಚಾಯಿತಿಗಳಿಗೆ ಚುನಾವಣೆ ನಡೆಸುವಂತೆ ಒತ್ತಾಯಿಸಿ ರಾಜ್ಯ ಚುನಾವಣಾ ಆಯುಕ್ತರಿಗೆ ಕಾಂಗ್ರೆಸ್ ಮನವಿ ಸಲ್ಲಿಸಿದೆ.

Advertisement

ಇಂದು ಕೆಪಿಸಿಸಿ ಅಧ್ಯಕ್ಷಡಿ.ಕೆ.ಶಿವಕುಮಾರ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ರಾಜ್ಯ ಚುನಾವಣಾ ಆಯುಕ್ತರಿಗೆ ಮನವಿ ಸಲ್ಲಿಸಿತು.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಎಸ್.ಆರ್.ಪಾಟೀಲ್, ಮಾಜಿ ಸಚಿವರಾದ ಎಚ್.ಕೆ ಪಾಟೀಲ್ ಮತ್ತಿತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next