ಹೊಸದಿಲ್ಲಿ: ಎಐಎಂಐಎಂ ಅಧ್ಯಕ್ಷ ಅಸಾದುದ್ದಿನ್ ಓವೈಸಿ ಅವರು ಕಾಂಗ್ರೆಸ್ ವಿರುದ್ಧ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದು, ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷವು ಸಮಾನ ಹೊಣೆಗಾರಿಕೆಯನ್ನು ಹೊಂದಿದೆ ಎಂದಿದ್ದಾರೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರವನ್ನು ಬಿಜೆಪಿ ಮತ್ತು ಆರೆಸ್ಸೆಸ್ ಗೆ ಹೋಲಿಸಬಹುದು ಎಂದು ಅವರು ಹೇಳಿದರು.
ಇತ್ತೀಚೆಗೆ ಬಾಬರಿ ಮಸೀದಿ ಧ್ವಂಸದಲ್ಲಿ ಕಾಂಗ್ರೆಸ್ ಪಾತ್ರದ ಕುರಿತು ಚರ್ಚೆ ಹುಟ್ಟುಹಾಕಿದ ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರು ಇತ್ತೀಚಿನ ಹೇಳಿಕೆಯ ನಂತರ ಓವೈಸಿ ಪ್ರತಿಕ್ರಿಯೆ ನೀಡಿದ್ದಾರೆ.
ಹೈದರಾಬಾದ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಾನು ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ನಾನು ಹೇಳುತ್ತಲೇ ಬಂದಿದ್ದೇನೆ, ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ಮತ್ತು ಆರ್ ಎಸ್ಎಸ್ ನಷ್ಟೇ ಕಾಂಗ್ರೆಸ್ ಪಾಲಿದೆ. ಬಾಬರಿ ಮಸೀದಿ ಧ್ವಂಸಕ್ಕೆ ಕಾಂಗ್ರೆಸ್ ಸಮಾನ ಹೊಣೆಗಾರಿಕೆ ಎಂಬುದು ಕಮಲ್ ನಾಥ್ ಹೇಳಿಕೆಯಿಂದ ಮತ್ತೊಮ್ಮೆ ಸಾಬೀತಾಗಿದೆ” ಎಂದು ಓವೈಸಿ ಹೇಳಿದರು.
ಕಮಲ್ ನಾಥ್ ಅವರು ಇತ್ತೀಚೆಗೆ ಬಾಬರಿ ಮಸೀದಿ ಮತ್ತು ರಾಜೀವ್ ಗಾಂಧಿ ಬಗ್ಗೆ ಹೇಳಿಕೆ ನೀಡಿದ್ದರು, 1986ರಲ್ಲಿ ರಾಜೀವ್ ಗಾಂಧಿ ಅವರು ಮಸೀದಿ ಬೀಗ ತೆರೆಸಿದ್ದರು. ಇತಿಹಾಸವನ್ನು ಯಾರೂ ಮರೆಯಬಾರದು ಎಂದಿದ್ದರು.
ಇದನ್ನೂ ಓದಿ:ಕುಡಿದ ಮತ್ತಿನಲ್ಲಿದ್ದ ರೈಲ್ವೆ ಪೊಲೀಸ್ ಅಧಿಕಾರಿಯ ಪಿಸ್ತೂಲ್ ನಿಂದಲೇ ಹತ್ಯೆಗೈದ ಪತ್ನಿ!
ರಾಮ ಮಂದಿರವು ಯವುದೇ ಒಂದು ಪಕ್ಷಕ್ಕೆ ಅಥವಾ ವ್ಯಕ್ತಿಗೆ ಸೇರಿದ್ದಲ್ಲ. ಅದು ಇಡಿ ದೇಶಕ್ಕೆ ಸಂಬಂಧಿಸಿದ್ದು. ಅದು ದೇಶದ ಪ್ರತಿಯೊಬ್ಬರದೂ. ಆದರೆ ಬಿಜೆಪಿ ತನ್ನ ಆಸ್ತಿ ಎಂಬಂತೆ ಬಳಸಿಕೊಳ್ಳುತ್ತಿದೆ. ಅವರ ಸರ್ಕಾರವಿದೆ. ಅವರು ನಿರ್ಮಿಸುತ್ತಿದ್ದಾರೆ. ಆದರೆ ಅವರೇನು ಅವರ ಹಣದಿಂದ ನಿರ್ಮಿಸುತ್ತಿಲ್ಲ. ಸರ್ಕಾರಿ ಹಣದಿಂದ ನಿರ್ಮಾಣ ಮಾಡಲಾಗುತ್ತಿದೆ” ಎಂದು ಕಮಲ್ ನಾಥ್ ಹೇಳಿದ್ದರು.