ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಟೀಕಾಪ್ರಹಾರ ನಡೆಸಿದರು.
Advertisement
ರವಿವಾರ ನಗರದಲ್ಲಿ ನಾಗಠಾಣ ವಿಧಾನಸಭೆ ಕ್ಷೇತ್ರದ ಪಕ್ಷದ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆ ರಾಮಕೃಷ್ಣ ಹೆಗಡೆ ಸರ್ಕಾರದ ಕೊಡುಗೆ. ಇದನ್ನು ಸಿದ್ದರಾಮಯ್ಯ ಸರ್ಕಾರ ತನ್ನದೆಂದು ಹೇಳಿಕೊಳ್ಳುತ್ತಿದೆ. ಮತ್ತೂಂದು ರಾಜ್ಯದಲ್ಲಿ ಅಭಿವೃದ್ಧಿ ಮಾಡದೇ ಜಾಹೀರಾತು ಸರ್ಕಾರ ನಡೆಸಿದ ಸಿದ್ದರಾಮಯ್ಯ ಸರ್ಕಾರ, ಇದಕ್ಕಾಗಿ 1 ಸಾವಿರ ಕೋಟಿ ರೂ. ಖರ್ಚು ಮಾಡಿದ್ದು ಅನುಮೋದಿಸಿದೆ, ಮಂಜೂರು ಮಾಡಿದೆ ಎಂಬುದನ್ನು ಹೇಳಲು ಬಳಸಿದೆಯೇ ಹೊರತು ಮಾಡಿದ ಸಾಧನೆ ಹೇಳಲು ಅಲ್ಲ. ಇನ್ನು ನೀರಾವರಿ ಸಚಿವ ಎಂ.ಬಿ. ಪಾಟೀಲ ಬಲಲೇಶ್ವರ ಕ್ಷೇತ್ರಕ್ಕೆ ಮಿತಿಗೊಂಡರೇ ಹೊರತು ಬೇರೆಡೆ ಚಿತ್ತ ಹರಿಸಲೇ ಇಲ್ಲ ಎಂದು ಲೇವಡಿ ಮಾಡಿದರು.
ವಿಶ್ಲೇಷಿಸಿದರು. ರಾಜ್ಯದಲ್ಲಿ ಕಾಂಗ್ರೆಸ್-ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಬಂದರೂ ಅಭಿವೃದ್ಧಿ ಬಗ್ಗೆ ಚರ್ಚಿಸದೇ ಪರಸ್ಪರ ಕೆಸರು ಎರಚಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ರೈತರು ಮಾತ್ರವಲ್ಲ ನೂರಾರು ನೇಕಾರರೂ ಆತ್ಮಹತ್ಯೆ ಮಾಡಿಕೊಂಡಿದ್ದು, ಬೆಳಗಾವಿ ಒಂದೇ ಜಿಲ್ಲೆಯಲ್ಲಿ 70 ನೇಕಾರರು ನೇಣಿಗೆ ಕೊರಳೊಡ್ಡಿದ್ದಾರೆ. ಇಷ್ಟಾದರೂ ಈ ಸರ್ಕಾರ ಕಣ್ತೆರೆದು ನೋಡಲಿಲ್ಲ. ಆದರೆ ನಮ್ಮ ಸರ್ಕಾರ
ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ರಾಜ್ಯದ ರೈತರ ರಾಷ್ಟ್ರೀಕೃತ, ಗ್ರಾಮೀಣ ಹಾಗೂ ಸಹಕಾರಿ ಎಲ್ಲ ಸಾಲ ಮಾಡಲಿದೆ. ಜೊತೆಗೆ ಕೃಷಿ ಸಬಲೀಕರಣಕ್ಕಾಗಿ ಇಸ್ರೇಲ್ ಮಾದರಿಯಲ್ಲಿ ಕೃಷಿ ಕಾರ್ಯಕ್ರಮಗಳನ್ನು ರೂಪಿಸಿ, ರೈತರ ಬೆವರಿನ ಶ್ರಮ ವ್ಯರ್ಥವಾಗದಂತೆ ಉತ್ಪನ್ನಗಳಿಗೆ ಮಾರುಕಟ್ಟೆ ಸೇರಿ ಹಲವು ಯೋಜನೆ ಜಾರಿಗೆ ತರಲಿದೆ ಎಂದರು.
Related Articles
Advertisement