Advertisement

ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ

11:20 AM Jun 30, 2020 | mahesh |

ಭರಮಸಾಗರ: ಕಾಂಗ್ರೆಸ್‌ ಪಕ್ಷದ ಅಧಿಕಾರ ಅವಧಿಯಲ್ಲಿ ನಗರಾಭಿವೃದ್ಧಿ ಮತ್ತು ಇಂಧನ ಇಲಾಖೆಗಳ ಸಚಿವರಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿರುವ ಡಿ.ಕೆ. ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಪಕ್ಷವನ್ನು ಉತ್ತಮವಾಗಿ ಸಂಘಟಿಸಿ ಪಕ್ಷವನ್ನು ಮತ್ತೂಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ತರಲಿದ್ದಾರೆ ಎಂದು ಮಾಜಿ ಸಚಿವ ಎಚ್‌. ಆಂಜನೇಯ ವಿಶ್ವಾಸ ವ್ಯಕ್ತಪಡಿಸಿದರು.

Advertisement

ಸಮೀಪದ ಕಾಲಗೆರೆ ಗ್ರಾಮದಲ್ಲಿ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಆಯೋಜಿಸಿದ್ದ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಹಳ್ಳಿ ಹಳ್ಳಿಗಳಲ್ಲಿ ಪಕ್ಷವನ್ನು ಬೇರು ಮಟ್ಟದಲ್ಲಿ ಸಂಘಟಿಸಿ ಪಕ್ಷದ ಬಲವರ್ಧನೆ ಮಾಡಲಾಗುತ್ತದೆ. ಬಿಜೆಪಿ ಸರ್ಕಾರದ ಬೇಜವಾಬ್ದಾರಿ ನಡೆಯಿಂದ ರಾಜ್ಯದ ಜನರು ರೋಸಿ ಹೋಗಿದ್ದಾರೆ. ಕೋವಿಡ್ ಕಾಯಿಲೆಯನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ.

ಪಕ್ಷದ ಕಾರ್ಯಕರ್ತರು ಕಾಂಗ್ರೆಸ್‌ನ ಜನಪರ ನಿಲುವುಗಳನ್ನು ಮುಂದಿಟ್ಟುಕೊಂಡು ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸಲಿದ್ದಾರೆ ಎಂದರು. ಜಿಪಂ ಮಾಜಿ ಉಪಾಧ್ಯಕ್ಷ ಎಚ್‌.ಎನ್‌. ತಿಪ್ಪೇಸ್ವಾಮಿ, ನಾಗೇಂದ್ರಪ್ಪ, ದಾದಾಪೀರ್‌, ಬ್ಲಾಕ್‌ ಉಸ್ತುವಾರಿ ಅಧ್ಯಕ್ಷ ದುರ್ಗೇಶ್‌ ಪೂಜಾರ್‌, ಮಧುಕುಮಾರ್‌, ಚಂದ್ರಪ್ಪ, ಚಂದ್ರಶೇಖರಪ್ಪ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next