Advertisement
ಈ ನಡುವೆಯೇ ಮತದಾರರನ್ನು ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳಲ್ಲಿ ಒಟ್ಟು 1.33 ಲಕ್ಷ ಮತದಾರರಿದ್ದಾರೆ. ಇದರಲ್ಲಿ ಶೇ.50ರಷ್ಟು ಸರ್ಕಾರಿ ನೌಕರರೇ ಹೆಚ್ಚಿನ ಸಂಖ್ಯೆಯ ಮತದಾರರಿದ್ದು, ಮತ ಸೆಳೆಯಲು ಮುಂದಾಗಿದ್ದಾರೆ.
Related Articles
Advertisement
ನಾಯಕರೂ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಪ್ರತ್ಯಾರೋಪ ಮಾಡಿದೆ. ಈ ಸಂಬಂಧ ಚುನಾವಣಾಧಿಕಾರಿಗೆ ಎರಡೂ ಪಕ್ಷಗಳಿಂದ ನೀಡಿರುವ ದೂರು ದಾಖಲಾಗಿದೆ.
ಕೈ ಗೆಲುವಿಗೆ ಕಸರತ್ತು : ದಕ್ಷಿಣ ಪದವೀಧರ ಕ್ಷೇತ್ರದಿಂದ ಇದುವರೆಗೂ ಒಂದು ಬಾರಿಯೂ ಕಾಂಗ್ರೆಸ್ ಗೆದ್ದಿಲ್ಲ. ಆದರೆ, ಈ ಚುನಾವಣೆಯನ್ನು ಕಾಂಗ್ರೆಸ್ ಗಂಭೀರವಾಗಿ ತೆಗೆದುಕೊಂಡಿದ್ದು, ಖಾತೆ ತೆರೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಕಳೆದ ವರ್ಷ ನಡೆದ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಭದ್ರಕೋಟೆ ಬೇ ಧಿಸಿ ಜಯಭೇರಿ ಬಾರಿಸಿತ್ತು. ಅದರಂತೆ ಈ ಚುನಾವಣೆಯನ್ನೂ ತನ್ನ ತೆಕ್ಕೆಗೆ ಪಡೆಯಲು ಮುಂದಾಗಿದೆ.
ಜೆಡಿಎಸ್-ಕಮಲಕ್ಕೆ ಬಂಡಾಯದ ಬಿಸಿ :
ಜೆಡಿಎಸ್ ಹಾಗೂ ಬಿಜೆಪಿ ಪಾಳೆಯಕ್ಕೆ ಬಂಡಾಯದ ಬಿಸಿ ಕಾಡುತ್ತಿದೆ. ಜೆಡಿಎಸ್ ವಿರುದ್ಧ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಸಮರ ಸಾರಿದ್ದು, ಅಭ್ಯರ್ಥಿ ಎಚ್.ಕೆ.ರಾಮು ಪರ ಚುನಾವಣೆ ಮಾಡದಂತೆ ತಮ್ಮ ಬೆಂಬಲಿಗರಿಗೆ ಬಹಿರಂಗವಾಗಿಯೇ ಸಂದೇಶ ರವಾನಿಸಿದ್ದಾರೆ. ಅಲ್ಲದೆ, ಜೆಡಿಎಸ್ ವರಿಷ್ಠರ ವಿರುದ್ಧವೂ ಗುಡುಗಿದ್ದಾರೆ. ಇದು ಚುನಾವಣೆಯಲ್ಲಿ ಪಕ್ಷದ ಮೇಲೆ ಪರಿಣಾಮ ಬೀರುವಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅತ್ತ ಬಿಜೆಪಿಯ ಬಂಡಾಯದ ಅಭ್ಯರ್ಥಿಯಾಗಿ ಎನ್.ಎಸ್. ವಿನಯ್ ಕೂಡ ನಾಮಪತ್ರ ಸಲ್ಲಿಸಿದ್ದು, ಕೇಸರಿ ಪಡೆಗೆ ಮಗ್ಗುಲ ಮುಳ್ಳಾಗುವ ಎಲ್ಲ ಸಾಧ್ಯತೆಗಳಿವೆ. ವರಿಷ್ಠರ ಮಾತನ್ನು ಮೀರಿ ವಿನಯ್ ಕೂಡ ಪಕ್ಷೇತರ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ್ದಾರೆ. ಅಲ್ಲದೆ, ನಾಲ್ಕೂ ಜಿಲ್ಲೆಗಳಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಇದು ಪಕ್ಷದ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಚುನಾವಣೆಯಲ್ಲಿ ಕೈ-ರೈತಸಂಘ ಹೊಂದಾಣಿಕೆ? :
ಚುನಾವಣೆ ಗೆಲ್ಲಲೇಬೇಕು ಎಂಬ ಹಠಕ್ಕೆ ಬಿದ್ದಿರುವ ಕಾಂಗ್ರೆಸ್ ರೈತಸಂಘದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈಗಾಗಲೇ ಕಾಂಗ್ರೆಸ್, ರೈತಸಂಘದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಈ ನಡುವೆ ಹೊಂದಾಣಿಕೆ ಮಾತುಕತೆ ನಡೆಯುವ ಸಾಧ್ಯತೆ ಇದೆ. ಇದಕ್ಕೆ ಪುಷ್ಠಿ ನೀಡುವಂತೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರು ಹೊಂದಾಣಿಕೆ ಬಗ್ಗೆ ಮಾತುಕತೆ ನಡೆಯಲಿವೆ ಎಂದು ಹೇಳಿಕೆ ನೀಡಿದ್ದರು.
-ಎಚ್.ಶಿವರಾಜು