Advertisement
ಶ್ರೀಕಷ್ಣನ ಜತೆ ಬಂಧನಕ್ಕೊಳಗಾದ ಹೇಮಂತ್ ಮುದ್ದಪ್ಪನ ಬಿಡುಗಡೆಗೆ ಪೊಲೀಸರ ಜತೆ ರಾಜ್ಯ ಬಿಜೆಪಿಯ ಪ್ರಮುಖ ನಾಯಕರೊಬ್ಬರು ಸಂಧಾನ ಮಾಡಿದ್ದಾರೆ. ಆ ನಾಯಕ ಯಾರೆಂದು ನಳಿನ್ ಕುಮಾರ್ ಕಟೀಲು ಅವರಿಗೆ ಗೊತ್ತಿರಬಹುದೇನೋ ಎಂದು ಹೊಸ “ಬಾಂಬ್’ ಹಾಕಿದ್ದಾರೆ.
Related Articles
Advertisement
ಬಿಟ್ ಕಾಯಿನ್ ಹಗರಣದಲ್ಲಿ ಬಿಜೆಪಿ ನಾಯಕರ ಮಕ್ಕಳ ಹೆಸರೂ ಕೇಳಿಬರುತ್ತಿವೆ. ಪುರಾವೆಗಳಿಲ್ಲದೆ ಕುಟುಂಬದ ಸದಸ್ಯರ ಹೆಸರು ಎಳೆದು ತರಬಾರದು ಎಂದು ಸುಮ್ಮನಿದ್ದೇನೆ. ಬಿಜೆಪಿ ನಾಯಕರು ಜೇನು ಗೂಡಿಗೆ ಕಲ್ಲೆಸೆಯುತ್ತಿದ್ದಾರೆ. ಕೆರಳಿದ ಜೇನು ನೊಣಗಳು ಯಾರನ್ನೆಲ್ಲ ಕಚ್ಚಲಿವೆಯೋ ಗೊತ್ತಿಲ್ಲ ಎಂದಿದ್ದಾರೆ.
ಕೊಪ್ಪಳದಲ್ಲಿ ಬಿಜೆಪಿ ಜನಸ್ವರಾಜ್ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಬಿಟ್ ಕಾಯಿನ್ ಬಗ್ಗೆ ನನಗೆ ಗೊತ್ತಿಲ್ಲ ಎಂದಿದ್ದಾರೆ. ಈ ಹಗರಣ 2016-17, 2018ರಲ್ಲಿ ನಡೆದಿದೆ ಎಂದು ಕಾಂಗ್ರೆಸ್‌ನ ಸುಜೇìವಾಲಾ ಆರೋಪಿಸಿದ್ದಾರೆ. ಆಗ ಸಿದ್ದರಾಮಯ್ಯ ಸರಕಾರ ಈ ಬಗ್ಗೆ ಯಾಕೆ ಮಾತನಾಡಲಿಲ್ಲ? ಶ್ರೀಕಿಯನ್ನು ಏಕೆ ಬಂಧಿಸಿ, ತನಿಖೆ ಮಾಡಲಿಲ್ಲ ಎಂದರು. ಅವರು ಮಾಡದ ಕೆಲಸವನ್ನು ನಾವು ಮಾಡಿದ್ದೇವೆ. ನಾವು ಹಿಡಿದು ತನಿಖೆಗೆ ಕೊಟ್ಟಿದ್ದೇವೆ ಮತ್ತು ಯಾರೇ ಆಗಿದ್ದರೂ ಕಠಿನ ಕ್ರಮ ಕೈಗೊಳ್ಳಲಿದ್ದೇವೆ ಎಂದರು.
ಬಿಜೆಪಿ ಟ್ವೀಟ್:
ಮುಳುಗುತ್ತಿರುವವನಿಗೆ ಹುಲ್ಲುಕಡ್ಡಿ ಆಸರೆ ಎಂಬಂತೆ ತನ್ನ ನಾಯಕತ್ವ ದುರ್ಬಲವಾಗುತ್ತಿರುವ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರಿಗೆ ಬಿಟ್‌ಕಾಯಿನ್ ಆಸರೆಯಾಗಿದೆ. ಆದರೆ ಒಂದು ಚಿತ್ರ ಸಾವಿರ ಕತೆ ಹೇಳುತ್ತದೆ. ಬಿಟ್ ಕಾಯಿನ್ ವಿಚಾರದಲ್ಲಿ ಪ್ರಭಾವಿ ಗಳು ಇದ್ದಾರೆಂದು ಆರೋಪಿಸಿ ದಾಖಲೆ ಇಲ್ಲ ಎನ್ನುತ್ತಿದ್ದಾರೆ. ನಿಮ್ಮ ಅತ್ಯಾಪ್ತರ ವಹಿವಾಟು ನಿಮ್ಮನ್ನು ಅಸಹಾಯಕ ನನ್ನಾಗಿ ಮಾಡಿದೆಯೇ ಎಂದು ಬಿಜೆಪಿ ಪ್ರಶ್ನಿಸಿದೆ. ಸಿದ್ದರಾಮಯ್ಯ ಪುತ್ರ ರಾಕೇಶ್ ಜತೆ ಶ್ರೀಕಿ ಸ್ನೇಹಿತರು ಇರುವ ಚಿತ್ರ ಟ್ಯಾಗ್ ಮಾಡಿದೆ.