Advertisement
ಅಧಿಕಾರಿಗಳ ಜತೆ ಚರ್ಚಿಸಿ ಮುಂದಿನ ಕ್ರಮಕಲಬುರಗಿ/ಬಾಗಲಕೋಟೆ: ರಾಜ್ಯ ಸರಕಾರ ಸಲ್ಲಿಸಿದ ಮನವಿಯ ಕಾಲು ಭಾಗದಷ್ಟೂ ಬರ ಪರಿ ಹಾರ ವನ್ನು ಕೇಂದ್ರ ನೀಡಿಲ್ಲ. ಈ ಬಗ್ಗೆ ಮತ್ತೊಮ್ಮೆ ಪ್ರತಿಭಟನೆ ನಡೆಸಲಾಗುವುದು. ಅ ಧಿಕಾರಿಗಳ ಜತೆ ಚರ್ಚಿಸಿ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರು: ರಾಜ್ಯ ಕೇಳಿದ್ದ ಪರಿಹಾರ ಮೊತ್ತದಲ್ಲಿ ಅತ್ಯಂತ ಕಡಿಮೆ ಪ್ರಮಾಣವನ್ನು ಕೇಂದ್ರ ಪರಿಹಾರವಾಗಿ ಘೋಷಿಸಿದೆ. ಇದು ಆನೆ ಹೊಟ್ಟೆಗೆ ಮೂರು ಕಾಸಿನ ಮಜ್ಜಿಗೆ ಕೊಟ್ಟಂತಾಗಿದೆ. ನಮ್ಮ ರಾಜ್ಯಕ್ಕೆ ಬರಬೇಕಾದ ಪರಿಹಾರ ಮೊತ್ತ ಪಡೆಯಲು ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಿಸಿದರು.
Related Articles
Advertisement
ಎಚ್.ಡಿ. ಕುಮಾರಸ್ವಾಮಿ ನಾಡದ್ರೋಹಿಕೇಂದ್ರ ಸರಕಾರ ಬಿಡುಗಡೆ ಮಾಡಿರುವ ಬರ ಪರಿಹಾರ ಮೊತ್ತ ಸಾಕು ಎಂದು ಹೇಳಿರುವ ಮಾಜಿ ಸಿಎಂ ಕುಮಾರಸ್ವಾಮಿ ನಾಡದ್ರೋಹಿ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರದ ಹಣ ರಾಜ್ಯಕ್ಕೆ ಇನ್ನೂ ಬಂದಿಲ್ಲ. ಆದರೂ ಬಿಜೆಪಿ ನಾಯಕರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಈ ಮಧ್ಯೆ ಕುಮಾರಸ್ವಾಮಿ ಅವರು ಈ ಮೊತ್ತ ಸಾಕು ಎಂದಿದ್ದಾರೆ. ಇದು ರಾಜ್ಯಕ್ಕೆ ಬರಬೇಕಾದ ಪರಿಹಾರ ಮೊತ್ತವೇ ಹೊರತು, ಇಷ್ಟು ಸಾಕು ಎನ್ನಲು ಇದು ಅವರ ಮನೆ ಆಸ್ತಿಯಲ್ಲ, ಇಂತಹ ಹೇಳಿಕೆ ನೀಡಿರುವ ಕುಮಾರಸ್ವಾಮಿ ನಾಡ ದ್ರೋಹಿ ಎಂದು ಕಟುವಾಗಿ ಟೀಕಿಸಿದರು. ಇವರು ಕೇಳಿದಷ್ಟು ಹಣ ನೀಡಲು ಸಾಧ್ಯವೇ?
ಬೆಂಗಳೂರು: ಬರ ನಿರ್ವಹಣೆಯಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ. ತಮ್ಮ ತಪ್ಪು ಮುಚ್ಚಿಟ್ಟುಕೊಳ್ಳಲು ಇವರು ಸದಾ ಕೇಂದ್ರ ಸರಕಾರದ ಮೇಲೆ ಟೀಕೆ ಮಾಡುತ್ತಿದ್ದಾರೆ. ಬರದಿಂದ ನೊಂದಿರುವ ಜನರಿಗೆ ಸರಕಾರ ಏನು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತ ನಾಡಿ, ಹಣ ಬಿಡುಗಡೆ ಮಾಡುವಾಗ ಎಲ್ಲ ಅಂಶಗಳನ್ನು ಕೇಂದ್ರ ಸರಕಾರ ಪರಿಗಣನೆಗೆ ತೆಗೆದುಕೊಂಡಿರುತ್ತದೆ. ಎನ್‌ಡಿಆರ್‌ಎಫ್ ನಿಧಿ ಬಿಡುಗಡೆಗೆ ನೀತಿ ನಿಯಮಗಳಿವೆ. ಇವರು ಕೇಳಿದಷ್ಟು ಹಣ ಕೊಡಲು ಸಾಧ್ಯವೇ? 15ನೇ ಹಣಕಾಸಿನ ಆಯೋಗದ ಶಿಫಾರಸಿನ ಹಿನ್ನೆಲೆಯಲ್ಲಿ ಹಣ ಬರುತ್ತದೆ ಎಂದು ಹೇಳಿದರು. ಕೇಂದ್ರ ಸರಕಾರ ರಾಜ್ಯಕ್ಕೆ 3,454 ಕೋಟಿ ರೂ. ಪರಿಹಾರ ನೀಡಿದೆ. ಪರಿಹಾರ ಕಡಿಮೆ ಬಂದಿದೆ ಎಂದಾದರೆ ಕೇಳಲಿ, ಅದು ಬಿಟ್ಟು ರಾಜಕೀಯ ಮಾಡಿಕೊಂಡಿದ್ದರೆ ಉಪಯೋಗವೇನು? ಎಂದು ಟೀಕಿಸಿದರು. ರಾಜ್ಯದಲ್ಲಿ ತೀವ್ರ ಬರವಿದೆ, ಅದಕ್ಕೆ ರಾಜ್ಯ ಸರಕಾರ ಏನು ಮಾಡಿದೆ? 2000 ರೂ. ಕೊಡುತ್ತೇವೆ ಎಂದಿದ್ದರು. ಆ ಹಣ ಯಾರಿಗೆ ಹೋಗಿದೆ? ಎಷ್ಟು ಜನಕ್ಕೆ ಹಣತಲುಪಿದೆ? ಆ 2,000 ರೂ.ನಲ್ಲಿ ಕೇಂದ್ರ ಸರಕಸರದ ಹಣ ಸೇರಿದೆ. ಅದನ್ನು ರಾಜ್ಯ ಸರಕಾರ ಹೇಳಬೇಕಲ್ಲವೇ? ಎಂದು ಪ್ರಶ್ನಿಸಿದರು. ಪರಿಹಾರ: ಸರಕಾರಕ್ಕೆ ಅಧಿಕೃತ ಪತ್ರ ಬಂದಿಲ್ಲ
ಬೆಂಗಳೂರು: ಎನ್‌ಡಿಆರ್‌ಎಫ್ ಮಾನದಂಡಗಳ ಪ್ರಕಾರ ರಾಜ್ಯಕ್ಕೆ 18,172 ಕೋಟಿ ರೂ. ಕೊಡಬೇಕಿದ್ದ ಕೇಂದ್ರ ಸರಕಾರ, 3,498 ಕೋಟಿ ರೂ. ಮಾತ್ರ ಘೋಷಣೆ ಮಾಡಿದೆ. ಆದರೆ, ಇದುವರೆಗೆ ಕೇಂದ್ರ ಹಣಕಾಸು ಇಲಾಖೆಯಿಂದ ರಾಜ್ಯ ಸರಕಾರಕ್ಕೆ ಈ ಸಂಬಂಧ ಯಾವುದೇ ಅಧಿಕೃತ ಪತ್ರ ಬಂದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರದ ವಿಚಾರದಲ್ಲಿ ರಾಜ್ಯದ ರೈತರ ಬೆನ್ನಿಗೆ ನಿಲ್ಲಬೇಕಿದ್ದ ಕೇಂದ್ರ ಸರಕಾರ, ಶೇ.20ಕ್ಕಿಂತ ಕಡಿಮೆ ಪರಿಹಾರ ಘೋಷಣೆ ಮಾಡುವ ಮೂಲಕ ರಾಜ್ಯದ ವಿರುದ್ಧ ಮಲತಾಯಿ ಧೋರಣೆ ಮುಂದುವರಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.